HOME » NEWS » Trend » GOLD PRICE TODAY GOLD RATES DECLINE IN INDIA AGAIN SILVER PRICE IN BANGALORE ON JUNE 18TH LG

Gold Price Today: ವಾರದಿಂದ ಕಡಿಮೆಯಾಗ್ತಿದೆ ಚಿನ್ನದ ಬೆಲೆ; ಕೊಳ್ಳೋದಕ್ಕೆ ಇದೇ ಬೆಸ್ಟ್ ಟೈಮ್..!

Gold and Silver Price Today: ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,300 ರೂ. ಇದ್ದುದು ಇಂದು 70,300 ರೂ. ಗೆ ಇಳಿಕೆಯಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 70,300 ರೂ. ಆಗಿದೆ.

news18-kannada
Updated:June 18, 2021, 7:17 AM IST
Gold Price Today: ವಾರದಿಂದ ಕಡಿಮೆಯಾಗ್ತಿದೆ ಚಿನ್ನದ ಬೆಲೆ; ಕೊಳ್ಳೋದಕ್ಕೆ ಇದೇ ಬೆಸ್ಟ್ ಟೈಮ್..!
ಚಿನ್ನ
  • Share this:
Gold Rate Today | ಕಳೆದೊಂದು ವಾರದಿಂದ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಕುಸಿತವಾಗುತ್ತಿದೆ. ಹೀಗಾಗಿ, ಬಂಗಾರ ಖರೀದಿಸಲು ಯೋಚಿಸುತ್ತಿದ್ದರೆ ಇದು ಸಕಾಲ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 49,460 ರೂ. ಇದ್ದುದು, 49890 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,340 ರೂ. ಇದ್ದುದು ಇಂದು 44,850 ರೂ.ಗೆ ಇಳಿದಿದೆ. ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ನಿನ್ನೆ 71,300 ರೂ.ಇದ್ದ ಬೆಳ್ಳಿ ಬೆಲೆ (Silver Price) ಇಂದು 70,300ಕ್ಕೆ ಇಳಿದಿದೆ.

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,410 ರೂ. ಇದ್ದುದು ಇಂದು 47,350 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,410 ರೂ. ಇತ್ತು. ಇಂದು ಆ ಬೆಲೆ 48,350ಕ್ಕೆ ಕುಸಿದಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,930 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,850 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 51,000 ರೂ. ದಾಟಿದೆ.

ಇದನ್ನೂ ಓದಿ:Explainer: ಬಿಟ್‌ ಕಾಯಿನ್‌ ಮೈನಿಂಗ್ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ

ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,300 ರೂ. ಇದ್ದುದು ಇಂದು 70,300 ರೂ. ಗೆ ಇಳಿಕೆಯಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 70,300 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 75,100 ರೂ. ಆಸುಪಾಸಿನಲ್ಲಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಇದನ್ನೂ ಓದಿ:Karnataka Weather Today: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
Youtube Video

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by: Latha CG
First published: June 18, 2021, 7:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories