HOME » NEWS » Trend » GOLD PRICE TODAY GOLD RATES INCREASED BY 10 RUPEES IN BANGALORE ON MAY 31 SILVER PRICE TODAY IN INDIA SCT

Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ

Gold and Silver Price on May 31: ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ. ನಿನ್ನೆಗಿಂತ ಇಂದು ಚಿನ್ನದ ಬೆಲೆ 10 ರೂ. ಹೆಚ್ಚಾಗಿದೆ.

news18-kannada
Updated:May 31, 2021, 8:12 AM IST
Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನ
  • Share this:
Gold Rate Today | ವರ್ಷಗಳು ಬದಲಾದರೂ, ಪೀಳಿಗೆಗಳು ಬದಲಾದರೂ ಜನರಿಗೆ ಚಿನ್ನದ ಮೇಲಿನ ವ್ಯಾಮೋಹ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ. ನಿನ್ನೆಗಿಂತ ಇಂದು ಚಿನ್ನದ ಬೆಲೆ 10 ರೂ. ಹೆಚ್ಚಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 49,950 ಇದ್ದುದು, ಇಂದು 49,960 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,800 ರೂ. ಇದ್ದುದು ಇಂದು 45,810 ರೂ.ಗೆ ಹೆಚ್ಚಳವಾಗಿದೆ. ಬೆಳ್ಳಿ ದರ ಕಳೆದ 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದು, 71,600 ರೂ. ಆಗಿದೆ.

ಭಾರತದಲ್ಲಿ ಚಿನ್ನದ ದರ ಮತ್ತೆ ಏರಿಕೆಯಾಗಿದ್ದು, ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,580 ರೂ. ಇದ್ದುದು ಇಂದು 46,590 ರೂ.ಗೆ ಏರಿಕೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,580 ರೂ. ಇದ್ದುದು ಇಂದು 47,590 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,960 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,810 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಇದನ್ನೂ ಓದಿ: Gold Price Today: ಬಂಗಾರಪ್ರಿಯರೇ ಗಮನಿಸಿ; ಬೆಂಗಳೂರು, ಮುಂಬೈ ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಏರಿಕೆ

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದ್ದು, 3 ದಿನಗಳಿಂದ 1 ಕೆ.ಜಿಗೆ ಬೆಳ್ಳಿಗೆ 71,600 ರೂ. ಇದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,200 ರೂ. ಆಸುಪಾಸಿನಲ್ಲಿದೆ.

ಇದನ್ನೂ ಓದಿ: Mehul Choksi | ಗರ್ಲ್​ಫ್ರೆಂಡ್ ಜೊತೆ ರೊಮ್ಯಾಂಟಿಕ್ ಟ್ರಿಪ್​ಗೆ ಹೋಗಿದ್ದ ಮೆಹುಲ್ ಚೋಕ್ಸಿಗೆ ಕಾದಿತ್ತು ಶಾಕ್!ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
Youtube Video

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by: Sushma Chakre
First published: May 31, 2021, 8:12 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories