HOME » NEWS » Trend » GOLD PRICE TODAY GOLD RATES RISES IN BENGALURU AND METRO CITIES SILVER PRICE DOWN TODAY SCT

Gold Price Today: ಇಂದು ಮತ್ತೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ ಕುಸಿತ

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 2 ದಿನಗಳ ಹಿಂದೆ 48,010 ರೂ. ಇದ್ದುದು ಇಂದು 48,160 ರೂ.ಗೆ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಇಂದು 1 ಕೆಜಿಗೆ 68,400 ರೂ. ಆಗಿದೆ.

news18-kannada
Updated:April 20, 2021, 10:44 AM IST
Gold Price Today: ಇಂದು ಮತ್ತೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ ಕುಸಿತ
ಚಿನ್ನ
  • Share this:
Gold Rate Today | ಕಳೆದೆರಡು ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಯಾಗುತ್ತಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 2 ದಿನಗಳ ಹಿಂದೆ 48,010 ರೂ. ಇದ್ದುದು ಇಂದು 48,160 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,010 ರೂ. ಇದ್ದುದು ಇಂದು 44,150 ರೂ. ಆಗಿದೆ. ನಿನ್ನೆ ಹಿಂದೆ 69,200 ರೂ. ಇದ್ದ ಬೆಳ್ಳಿ ಬೆಲೆ ಇಂದು 68,400ಕ್ಕೆ ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2 ದಿನಗಳ ಹಿಂದೆ 44,960 ರೂ. ಇದ್ದುದು ಇಂದು 45,080 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 45,960 ರೂ. ಇದ್ದುದು ಇಂದು 46,080 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,180 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,170 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಇಂದು 1 ಕೆಜಿಗೆ 68,400 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 68,400 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,000 ರೂ. ಆಸುಪಾಸಿನಲ್ಲಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Published by: Sushma Chakre
First published: April 20, 2021, 10:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories