Gold Price Today: ಭಾರೀ ಕುಸಿತ ಕಂಡ ಚಿನ್ನದ ದರ; ನಿಮ್ಮ ನಗರದಲ್ಲಿ ಇಂದಿನ ಬಂಗಾರದ ಬೆಲೆಯೆಷ್ಟು?

Gold and Silver Price Today: ಭಾರತದಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,220 ರೂ.ಇತ್ತು. ಇಂದು ಆ ಬೆಲೆ 46,210 ರೂ.ಗೆ ಕುಸಿದಿದೆ.

ಚಿನ್ನ

ಚಿನ್ನ

  • Share this:
    Gold Rate Today: ಮೂರ್ನಾಲ್ಕು ದಿನಗಳಿಂದ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತವಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 47,990 ರೂ. ಇದ್ದುದು, 47,980 ರೂ.ಗೆ ಇಳಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 43,990 ರೂ. ಇದ್ದುದು ಇಂದು 43,980 ರೂ.ಗೆ ಇಳಿದಿದೆ. ಬೆಳ್ಳಿ ದರ ಯಥಾಸ್ಥಿತಿಯಲ್ಲಿದ್ದು, 3 ದಿನಗಳಿಂದ ಬೆಳ್ಳಿ ಬೆಲೆ (Silver Price) 1 ಕೆ.ಜಿಗೆ 67,600 ಇದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,220 ರೂ.ಇತ್ತು. ಇಂದು ಆ ಬೆಲೆ 46,210 ರೂ.ಗೆ ಕುಸಿದಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 47,220 ರೂ. ಇದ್ದುದು ಇಂದು 47,210 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,980 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 43,980 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,000 ರೂ.ಗೆ ಸಮೀಪದಲ್ಲಿದೆ.

    ಇದನ್ನೂ ಓದಿ: Free Vaccine: 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಇಂದಿನಿಂದ ಉಚಿತ ಕೊರೋನಾ ಲಸಿಕೆ; ಯೋಗ ದಿನಕ್ಕೆ ಮೋದಿ ಕೊಡುಗೆ

    ಭಾರತದಲ್ಲಿ ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಆದರೆ, 3 ದಿನಗಳ ಹಿಂದೆ ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗಿಲ್ಲ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 67,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,100 ರೂ. ಆಸುಪಾಸಿನಲ್ಲಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Sushma Chakre
    First published: