Gold Price Today: ಬೆಂಗಳೂರಿನಲ್ಲಿ 50 ಸಾವಿರ ರೂ. ದಾಟಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಒಂದೇ ದಿನ 1,600 ರೂ. ಹೆಚ್ಚಳ

Bengaluru Gold Price Today: ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 49,640 ರೂ. ಇದ್ದುದು, ಇಂದು 430 ರೂ. ಏರಿಕೆ ಕಾಣುವ ಮೂಲಕ 50,070 ರೂ. ಆಗಿದೆ. ನಿನ್ನೆ 70,000 ರೂ.ಇದ್ದ ಬೆಳ್ಳಿ ಬೆಲೆ ಇಂದು 71,600ಕ್ಕೆ ಏರಿಕೆಯಾಗಿದೆ.

ಚಿನ್ನ

ಚಿನ್ನ

  • Share this:
    Gold Rate Today | ಭಾರತದಲ್ಲಿ ನಿನ್ನೆ ದಾಖಲೆಯ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಹೀಗಾಗಿ ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 49,640 ರೂ. ಇದ್ದುದು, ಇಂದು 430 ರೂ. ಏರಿಕೆ ಕಾಣುವ ಮೂಲಕ 50,070 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,500 ರೂ. ಇದ್ದುದು ಇಂದು 45,900 ರೂ.ಗೆ ಏರಿಕೆಯಾಗಿದೆ. ನಿನ್ನೆ 70,000 ರೂ.ಇದ್ದ Silver Price ಇಂದು 71,600ಕ್ಕೆ ಏರಿಕೆಯಾಗಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದ್ದು, ನಿನ್ನೆಗಿಂತ ಇಂದು ಬರೋಬ್ಬರಿ 400 ರೂ.ಗೂ ಹೆಚ್ಚು ಏರಿಕೆಯಾಗುವ ಮೂಲಕ ಚಿನ್ನ ಖರೀದಿಸುವವರಿಗೆ ಬೆಲೆಯೇರಿಕೆಯ ಶಾಕ್ ನೀಡಿದೆ.

    ಇದನ್ನೂ ಓದಿ: Amazon Blunder: ಕೊನೆಗೂ ಎಚ್ಚೆತ್ತುಕೊಂಡ ಅಮೇಜಾನ್; ಕನ್ನಡ ಧ್ವಜವಿದ್ದ ಬಿಕಿನಿ ಚಿತ್ರ ಬದಲಾಯ್ತು!

    ಭಾರತದಲ್ಲಿ ಚಿನ್ನದ ದರ ನಿನ್ನೆಗಿಂತ ಇಂದು 340 ರೂ. ಏರಿಕೆ ಕಂಡಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,960 ರೂ. ಇದ್ದುದು ಇಂದು 48,300 ರೂ.ಗೆ ಏರಿಕೆಯಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,960 ರೂ. ಇತ್ತು. ಇಂದು ಆ ಬೆಲೆ 49,300ಕ್ಕೆ ಏರಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,070 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,900 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

    ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

    ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಂದು ಭಾರೀ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 70,000 ರೂ. ಇದ್ದುದು ಇಂದು 71,600 ರೂ. ಗೆ ಹೆಚ್ಚಳವಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,500 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಬಿರುಸುಗೊಂಡ ಮುಂಗಾರು; ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Sushma Chakre
    First published: