Gold Price Today June 7: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿಂದು ಬೆಳ್ಳಿ ದರ ಎಷ್ಟು?

Bengaluru Gold Price Today: ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    Gold Rate Today | ಭಾರತದಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ ಗಗನಕ್ಕೇರುವ ಮೂಲಕ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಈ ನಡುವೆ ಚಿನ್ನದ ಬೆಲೆಯೂ ದಾಖಲೆಯ ಮೊತ್ತಕ್ಕೆ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price 2 ದಿನಗಳ ಹಿಂದೆ 49,640 ರೂ. ಇದ್ದುದು, ಇಂದು 440 ರೂ. ಏರಿಕೆ ಕಾಣುವ ಮೂಲಕ 50,080 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,500 ರೂ. ಇದ್ದುದು ಇಂದು 45,910 ರೂ.ಗೆ ಏರಿಕೆಯಾಗಿದೆ. 2 ದಿನಗಳ ಹಿಂದೆ 70,000 ರೂ.ಇದ್ದ Silver Price ಇಂದು 71,600ಕ್ಕೆ ಏರಿಕೆಯಾಗಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದ್ದು, ನಿನ್ನೆಗಿಂತ ಇಂದು ಬರೋಬ್ಬರಿ 400 ರೂ.ಗೂ ಹೆಚ್ಚು ಏರಿಕೆಯಾಗುವ ಮೂಲಕ ಚಿನ್ನ ಖರೀದಿಸುವವರಿಗೆ ಬೆಲೆಯೇರಿಕೆಯ ಶಾಕ್ ನೀಡಿದೆ.

    ಇದನ್ನೂ ಓದಿ: Karnataka Weather Today: ಮುಂಗಾರು ಪ್ರವೇಶದಿಂದ ರೈತರಿಗೆ ಸಂತಸ; ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ

    ಭಾರತದಲ್ಲಿ ಚಿನ್ನದ ದರ ಮತ್ತೆ ಏರಿಕೆ ಕಂಡಿದೆ. 2 ದಿನಗಳ ಹಿಂದೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,960 ರೂ. ಇದ್ದುದು ಇಂದು 48,310 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,960 ರೂ. ಇತ್ತು. ಇಂದು ಆ ಬೆಲೆ 49,310ಕ್ಕೆ ಏರಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,080 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,910 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

    ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

    ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಂದು ಭಾರೀ ಏರಿಕೆಯಾಗಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಗೆ 70,000 ರೂ. ಇದ್ದುದು ಇಂದು 71,600 ರೂ. ಗೆ ಹೆಚ್ಚಳವಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,300 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ: Petrol Price in Karnataka: ಕರ್ನಾಟಕದ ಚಿಕ್ಕಮಗಳೂರು, ಶಿರಸಿ, ಬಳ್ಳಾರಿಯಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ!

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Sushma Chakre
    First published: