Gold Price Today: ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ; ಬೆಳ್ಳಿ ಬೆಲೆಯೂ ಒಂದೇ ದಿನ 200 ರೂ. ಕುಸಿತ

Gold and Silver Price Today: ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,500 ರೂ. ಇದ್ದುದು ಇಂದು 71,300 ರೂ. ಗೆ ಕುಸಿದಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    Gold Rate Today | ಕಳೆದೊಂದು ವಾರದಿಂದ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಕುಸಿತವಾಗುತ್ತಿದೆ. ಹೀಗಾಗಿ, ಬಂಗಾರ ಖರೀದಿಸಲು ಯೋಚಿಸುತ್ತಿದ್ದರೆ ಇದು ಸಕಾಲ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 49,640 ರೂ. ಇದ್ದುದು, 49,630 ರೂ.ಗೆ ಇಳಿದಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,490 ರೂ. ಇದ್ದುದು ಇಂದು 45,500 ರೂ.ಗೆ ಏರಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ನಿನ್ನೆ 71,500 ರೂ.ಇದ್ದ ಬೆಳ್ಳಿ ಬೆಲೆ (Silver Price) ಇಂದು 71,300ಕ್ಕೆ ಕುಸಿದಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು ಇಂದು 47,590 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,600 ರೂ. ಇತ್ತು. ಇಂದು ಆ ಬೆಲೆ 48,590ಕ್ಕೆ ಕುಸಿದಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,630 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 45,500 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 51,000 ರೂ. ದಾಟಿದೆ.

    ಇದನ್ನೂ ಓದಿ: Karnataka Weather Today: ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ತತ್ತರ; ಇನ್ನೆರಡು ದಿನ ಭಾರೀ ಮಳೆ

    ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,500 ರೂ. ಇದ್ದುದು ಇಂದು 71,300 ರೂ. ಗೆ ಕುಸಿದಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,300 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,200 ರೂ. ಆಸುಪಾಸಿನಲ್ಲಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಇದನ್ನೂ ಓದಿ: Bengaluru Crime: ಬೆಂಗಳೂರಿನ ಪಿಜಿಯಿಂದಲೇ ಗಾಂಜಾ ಮಾರಾಟ; ಪ್ರಿಯಕರನ ಮಾತು ಕೇಳಿ ಜೈಲುಪಾಲಾದ ಯುವತಿ!

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್​ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Sushma Chakre
    First published: