Gold Rate: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಬೆಲೆಯೆಷ್ಟು?

Gold Silver Price Today: ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,070 ರೂ. ಆಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ನಿನ್ನೆಗಿಂತ ಇಂದು 1,000 ರೂ. ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಗೆ 64,200 ರೂ. ಆಗಿದೆ.

ಚಿನ್ನ

ಚಿನ್ನ

  • Share this:
10 ದಿನಗಳ ಹಿಂದೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆದರೆ, ನಿನ್ನೆಗಿಂತ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.  ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. 10 ದಿನಗಳ ಹಿಂದೆ 24 ಕ್ಯಾರೆಟ್​ನ 10 ಗ್ರಾಂ. ಚಿನ್ನಕ್ಕೆ 47,920 ರೂ. ಇತ್ತು. ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ 49,310 ರೂ. ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,070 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,900 ರೂ. ಇದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ದೆಹಲಿ, ಕೊಯಮತ್ತೂರು, ಜೈಪುರ, ಚೆನ್ನೈ, ಲಕ್ನೋದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ.

ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,310 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 49,310 ರೂ. ಆಗಿದೆ. ಇದು ಆಯಾ ನಗರಗಳಲ್ಲಿ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,070 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 45,900 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಇಂದು ಚಿನ್ನದ ಬೆಲೆ ಕಡಿಮೆಯಾಗಿದೆ.

ಭಾರತದಲ್ಲಿ ಬೆಳ್ಳಿಯ ಬೆಲೆ ನಿನ್ನೆಗಿಂತ ಇಂದು 1,000 ರೂ. ಕಡಿಮೆಯಾಗಿದೆ. ಆದರೆ, ಕಳೆದೊಂದು ವಾರದಿಂದ ಬೆಳ್ಳಿಯ ದರದಲ್ಲಿ ಭಾರೀ ಏರಿಕೆಯಾಗುತ್ತಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,400 ರೂ. ಇತ್ತು. ಇಂದು 63,400 ರೂ. ಆಗಿದೆ. ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಗೆ 64,200 ರೂ. ಆಗಿದೆ. ಚೆನ್ನೈ, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 1 ಕೆಜಿಗೆ 67,300 ರೂ. ಆಗಿದೆ.

ಇದನ್ನೂ ಓದಿ: New Parliament Building: 971 ಕೋಟಿ ರೂ. ವೆಚ್ಚದ ನೂತನ ಸಂಸತ್ ಭವನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.



ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಕಳೆದೊಂದು ವಾರದಿಂದ ಚಿನ್ನದ ಬೆಲೆಯಲ್ಲೂ ಏರಿಳಿತಗಳು ಉಂಟಾಗುತ್ತಿದೆ.
Published by:Sushma Chakre
First published: