Gold Price Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಬೆಳ್ಳಿ ದರದಲ್ಲೂ ಭಾರೀ ಹೆಚ್ಚಳ

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,330 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,300 ರೂ. ಆಗಿದೆ.

ಚಿನ್ನ

ಚಿನ್ನ

  • Share this:
    Gold Rate Today July 4th: ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿತ್ತು. ಆದರೆ, ನಿನ್ನೆಯಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,330 ರೂ. ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ನಿನ್ನೆ 44,200 ರೂ. ಇದ್ದುದು ಇಂದು 44,300 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ಇಂದು 700 ರೂ. ಏರಿಕೆಯಾಗುವ ಮೂಲಕ 1 ಕೆಜಿ ಬೆಳ್ಳಿಗೆ 68,500 ರೂ. ಇದ್ದುದ್ದು, 69,200 ರೂ. ಆಗಿದೆ.

    ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,240 ರೂ. ಇದ್ದುದು, ಇಂದು 46,300 ರೂ.ಗೆ ಏರಿಕೆ ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,240 ರೂ. ಇದ್ದುದು ಇಂದು 47,300 ರೂ.ಗೆ ಏರಿಕೆ ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

    ಇದನ್ನೂ ಓದಿ:Karnataka Weather Today: ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

    ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,330 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 44,300 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,000 ರೂ.ಗೆ ಸಮೀಪದಲ್ಲಿದೆ.

    ಭಾರತದಲ್ಲಿ ಬೆಳ್ಳಿ ದರವೂ ಭಾರೀ ಏರಿಕೆ ಕಂಡಿದೆ. ನಿನ್ನೆ 1 ಕೆಜಿಗೆ 200 ರೂ. ಕಡಿಮೆಯಾಗಿ, 68,500 ರೂ. ಆಗಿತ್ತು. ಆದರೆ ಇಂದು 1 ಕೆ.ಜಿ ಬೆಳ್ಳಿಗೆ 700 ರೂ. ಏರಿಕೆಯಾಗುವ ಮೂಲಕ 69,200 ರೂ.ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 69,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,900 ರೂ. ಆಸುಪಾಸಿನಲ್ಲಿದೆ.

    ಇದನ್ನೂ ಓದಿ:Morning Digest: ಕರ್ನಾಟಕ ಅನ್​ಲಾಕ್​ 3.0 ಗೈಡ್​​ಲೈನ್ಸ್​ ರಿಲೀಸ್, ಜಮ್ಮು-ಕಾಶ್ಮೀರದಲ್ಲಿ ಮತ್ತೆ ಡ್ರೋನ್ ಪತ್ತೆ; ಇಂದಿನ ಪ್ರಮುಖ ಸುದ್ದಿಗಳಿವು

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
    Published by:Latha CG
    First published: