Gold Rate: ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಏರಲಿದೆಯೋ, ಇಳಿಯಲಿದೆಯೋ?; ಇಲ್ಲಿದೆ ಮಾಹಿತಿ

Gold Price Today: ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ.

news18-kannada
Updated:September 10, 2020, 8:26 AM IST
Gold Rate: ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಏರಲಿದೆಯೋ, ಇಳಿಯಲಿದೆಯೋ?; ಇಲ್ಲಿದೆ ಮಾಹಿತಿ
ಚಿನ್ನ
  • Share this:
Gold Price Today: ಬೆಂಗಳೂರು (ಸೆಪ್ಟೆಂಬರ್ 10): ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಎರಡು ದಿನ ಚಿನ್ನದ ದರ ಭಾರೀ ಏರಿಕೆ ಕಂಡರೆ, ಇನ್ನೂ ಎರಡೂ ದಿನ ಇಳಿಕೆ ಕಾಣುತ್ತಿದೆ. ಬುಧವಾರ ಆಭರಣ ಚಿನ್ನ ದರ 10 ಗ್ರಾಂಗೆ 230 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ ಬೆಲೆ 48,500 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ ಚಿನ್ನದ ದರ 230 ರೂಪಾಯಿ ಏರಿಕೆ ಕಾಣುವ ಮೂಲಕ 52,900 ರೂಪಾಯಿ ಆಗಿದೆ.

ಕೆಲ ದಿನಗಳ ಕಾಲ ಬೆಳ್ಳಿ ದರ ಇಳಿಕೆ ಕಂಡಿತ್ತು. ನಂತರ ಮತ್ತೆ ಬೆಳ್ಳಿ ದರದಲ್ಲಿ ಏರಿಕೆ ಕಂಡಿತ್ತು. ಈ ಮೂಲಕ ಕೆಜಿ ಬೆಳ್ಳಿಗೆ 70 ಸಾವಿರದ ಗಡಿ ದಾಟಿತ್ತು. ನಂತರ ಸತತವಾಗಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡಿತ್ತು. ಬುಧವಾರ ಬೆಳ್ಳಿ ದರ ಇಳಿಕೆ ಕಂಡಿದೆ. ಬೆಳ್ಳಿ ದರ 100 ರೂಪಾಯಿ ಕುಸಿತ ಕಂಡಿದ್ದು, 67,900 ರೂಪಾಯಿ ಆಗಿದೆ.

Gold
Gold


ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ಇದನ್ನೂ ಓದಿ: Gold Rate: ಬಂಗಾರದ ಆಭರಣಗಳ ದರದಲ್ಲಿ ಅಲ್ಪ ಇಳಿಕೆ; ಭಾರೀ ಏರಿಕೆ ಕಂಡ ಬೆಳ್ಳಿ

ಮತ್ತೆ ಏರಿಕೆ ಕಾಣಲಿದೆ ಚಿನ್ನ?:
ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.
Published by: Rajesh Duggumane
First published: September 10, 2020, 8:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading