Fuel Price Today: ಕೊರೋನಾ ಸಂಕಷ್ಟದ ನಡುವೆ ಜನರಿಗೆ ಬೆಲೆಯೇರಿಕೆಯ ಬಿಸಿ ತಟ್ಟುತ್ತಿದ್ದು, ಕರ್ನಾಟಕದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ದೇಶದಲ್ಲಿ ಪೆಟ್ರೋಲ್ ಮಾತ್ರವಲ್ಲದೆ ಡೀಸೆಲ್ ಬೆಲೆಯೂ 100 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ! ಹಾಗಾದರೆ, ದೆಹಲಿ, ಚೆನ್ನೈ, ಬೆಂಗಳೂರು, ಮುಂಬೈ ಸೇರಿ ಯಾವ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...
ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಬೀದರ್, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ 99 ರೂ. ಗಡಿಯಲ್ಲಿದ್ದು ಸದ್ಯದಲ್ಲೇ ಶತಕ ಬಾರಿಸುವ ಸಾಧ್ಯತೆಯಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 100 ರೂ.ನತ್ತ ದಾಪುಗಾಲಿಡುತ್ತಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ. ಕಳೆದ 2 ವರ್ಷಗಳಲ್ಲಿ ಪೆಟ್ರೋಲ್ ದರ ಇದುವರೆಗಿನ ಎಲ್ಲ ದಾಖಲೆಗಳನ್ನೂ ಮುರಿದಿದೆ. ಇಂದು ಕೂಡ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳವಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಿದ ರಾಜ್ಯಗಳ ಪೈಕಿ ಕರ್ನಾಟಕ 7ನೇ ರಾಜ್ಯವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ನಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ.
ಇದನ್ನೂ ಓದಿ: Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ಇಂದಿನಿಂದ ಜೂನ್ 17ರವರೆಗೆ ಆರೆಂಜ್ ಅಲರ್ಟ್ ಘೋಷಣೆ
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.12 ರೂ. ಇದೆ. ಕೊಲ್ಕತ್ತಾದಲ್ಲಿ 96.06 ರೂ., ಮುಂಬೈನಲ್ಲಿ 102.30 ರೂ., ಚೆನ್ನೈನಲ್ಲಿ 97.43 ರೂ., ಗುರ್ಗಾಂನಲ್ಲಿ 93.74 ರೂ., ನೋಯ್ಡಾದಲ್ಲಿ 93.58 ರೂ., ಬೆಂಗಳೂರಿನಲ್ಲಿ 99.33 ರೂ., ಭುವನೇಶ್ವರದಲ್ಲಿ 96.87 ರೂ., ಚಂಡೀಗರ್ನಲ್ಲಿ 92.45 ರೂ., ಹೈದರಾಬಾದ್ನಲ್ಲಿ 99.90 ರೂ., ಜೈಪುರದಲ್ಲಿ 102.73 ರೂ., ಲಕ್ನೋದಲ್ಲಿ 93.40 ರೂ., ಪಾಟ್ನಾದಲ್ಲಿ 98.68 ರೂ., ತಿರುವನಂತಪುರದಲ್ಲಿ 98 ರೂ. ಇದೆ.
ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 100 ರೂ. ದಾಟಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ಗೆ 86.98 ರೂ. ಇದೆ. ಚೆನ್ನೈನಲ್ಲಿ 91.64 ರೂ, ಮುಂಬೈನಲ್ಲಿ 94.39 ರೂ, ಬೆಂಗಳೂರಿನಲ್ಲಿ 92.21 ರೂ, ಹೈದರಾಬಾದ್ನಲ್ಲಿ 94.82 ರೂ. ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
ಇದನ್ನೂ ಓದಿ: Gold Price Today: ಚಿನ್ನ ಖರೀದಿಗೆ ಇದು ಸಕಾಲ; ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ದಿನ 400 ರೂ. ಕುಸಿತ
ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ