• ಹೋಂ
  • »
  • ನ್ಯೂಸ್
  • »
  • ಟ್ರೆಂಡ್
  • »
  • Petrol Price Today: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಗೆ ಕೊಂಚ ಬ್ರೇಕ್; ನಿಟ್ಟುಸಿರು ಬಿಟ್ಟ ವಾಹನ ಸವಾರರು!

Petrol Price Today: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಗೆ ಕೊಂಚ ಬ್ರೇಕ್; ನಿಟ್ಟುಸಿರು ಬಿಟ್ಟ ವಾಹನ ಸವಾರರು!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol and Diesel Price Today | ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...

  • Share this:

    Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಕಂಗೆಟ್ಟಿದ್ದ ವಾಹನ ಸವಾರರು ಇಂದು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಸತತವಾಗಿ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಬೆಲೆಯಲ್ಲಿ ಇಂದು ಯಾವುದೇ ಏರಿಳಿತವಾಗಿಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ಗೆ 101 ರೂ. ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...


    ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.


    ಇದನ್ನೂ ಓದಿ: Karnataka Weather Today: ಕರಾವಳಿಯಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಮಲೆನಾಡಿನಲ್ಲೂ ನಾಳೆ ವರುಣನ ಆರ್ಭಟ


    ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ ಗೆ 108.46 ರೂ. ಆಗುವ ಮೂಲಕ ಇಡೀ ದೇಶದಲ್ಲೇ ದುಬಾರಿ ನಗರ ಎನಿಸಿಕೊಂಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.76 ರೂ. ಇದೆ. ಕೊಲ್ಕತ್ತಾದಲ್ಲಿ 97.63 ರೂ., ಮುಂಬೈನಲ್ಲಿ 103.89 ರೂ., ಚೆನ್ನೈನಲ್ಲಿ 98.88 ರೂ., ನೋಯ್ಡಾದಲ್ಲಿ 94.92 ರೂ., ಬೆಂಗಳೂರಿನಲ್ಲಿ 101.03 ರೂ., ಭುವನೇಶ್ವರದಲ್ಲಿ 98.85 ರೂ., ಹೈದರಾಬಾದ್ನಲ್ಲಿ 101.60 ರೂ., ಜೈಪುರದಲ್ಲಿ 104.20 ರೂ., ಲಕ್ನೋದಲ್ಲಿ 94.70 ರೂ., ಪಾಟ್ನಾದಲ್ಲಿ 99.86 ರೂ., ತಿರುವನಂತಪುರದಲ್ಲಿ 99.62 ರೂ. ಇದೆ.


    ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 101.40 ರೂ. ಆಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 88.30 ರೂ. ಇದೆ. ಚೆನ್ನೈನಲ್ಲಿ 92.89 ರೂ, ಮುಂಬೈನಲ್ಲಿ 95.79 ರೂ, ಬೆಂಗಳೂರಿನಲ್ಲಿ 93.61 ರೂ, ಹೈದರಾಬಾದ್ನಲ್ಲಿ 96.25 ರೂ. ಇದೆ.


    ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.


    ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರದಲ್ಲಿ ಭಾರೀ ಕುಸಿತ


    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.


    ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.


    ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.

    Published by:Sushma Chakre
    First published: