• ಹೋಂ
  • »
  • ನ್ಯೂಸ್
  • »
  • ಟ್ರೆಂಡ್
  • »
  • Petrol Price Today: ಮುಂಬೈ, ಜೈಪುರದಲ್ಲಿ ಮತ್ತೆ 100 ರೂ. ದಾಟಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯಲ್ಲೂ ಏರಿಕೆ

Petrol Price Today: ಮುಂಬೈ, ಜೈಪುರದಲ್ಲಿ ಮತ್ತೆ 100 ರೂ. ದಾಟಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯಲ್ಲೂ ಏರಿಕೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol and Diesel Price on May 30: ಇದೇ ಮೊದಲ ಬಾರಿಗೆ ನಿನ್ನೆಯಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

  • Share this:

Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 2 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ದರದಲ್ಲಿ ಕೊಂಚ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ನಿನ್ನೆಯಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಬೆಂಗಳೂರು, ದೆಹಲಿ, ಜೈಪುರ, ಚೆನ್ನೈ, ಕೊಲ್ಕತ್ತಾ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ.


ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.94 ರೂ. ಇದೆ. ಮುಂಬೈನಲ್ಲಿ 100.19 ರೂ, ಜೈಪುರದಲ್ಲಿ 100.44 ರೂ, ಬೆಂಗಳೂರಿನಲ್ಲಿ 97.07 ರೂ, ಹೈದರಾಬಾದ್​ನಲ್ಲಿ 97.63 ರೂ, ತಿರುವನಂತಪುರದಲ್ಲಿ 96 ರೂ, ಚೆನ್ನೈನಲ್ಲಿ 95.51 ರೂ, ಕೊಲ್ಕತ್ತಾದಲ್ಲಿ 93.97 ರೂ. ಇದೆ.


ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಕೊಂಚ ಏರಿಕೆಯಾಗಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಭುವನೇಶ್ವರ, ತಿರುವನಂತಪುರ, ಪಾಟ್ನಾದಲ್ಲಿ 1 ಲೀಟರ್ ಡೀಸೆಲ್ ಬೆಲೆ 88 ರೂ. ಆಗಿದೆ. ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್​ಗೆ 84.89 ರೂ. ಇದೆ. ಚೆನ್ನೈನಲ್ಲಿ 89.65 ರೂ, ಮುಂಬೈನಲ್ಲಿ 92.17 ರೂ, ಬೆಂಗಳೂರಿನಲ್ಲಿ 89.99 ರೂ, ಹೈದರಾಬಾದ್​ನಲ್ಲಿ 92.54 ರೂ. ಇದೆ.


ಇದನ್ನೂ ಓದಿ: Chikmagalur Crime: ಹಣ ನೀಡಲಿಲ್ಲವೆಂದು ಮೂಡಿಗೆರೆಯಲ್ಲಿ ಅಪ್ಪನನ್ನು ಕೊಚ್ಚಿ ಕೊಂದ ಪಾಪಿ ಮಗ


ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.


ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ಸರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಆದ್ದರಿಂದ ಕೊರೋನಾ ಮತ್ತು ಲಾಕ್ಡೌನ್ ನಡುವೇ ಮೊದಲೇ ಸಂಕಷ್ಟಕ್ಕೆ ಸಿಲುಕಿರುವವರಿಗೆ ನಿತ್ಯ ವಸ್ತುಗಳ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ‌ ಎಂಬುದು ಗೊತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಉದಾರತೆ ತೋರುತ್ತಿಲ್ಲ.


ಇದನ್ನೂ ಓದಿ: Gold Price Today: ಬಂಗಾರಪ್ರಿಯರೇ ಗಮನಿಸಿ; ಬೆಂಗಳೂರು, ಮುಂಬೈ ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಏರಿಕೆ

top videos


    ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ.


    ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು