Teachers' Day 2021: ಆ ಒಂದು ಸಂದರ್ಭವನ್ನು ರಾಧಾಕೃಷ್ಣನ್ ಅವರು ಸದಾ ನೆನಸಿಕೊಳ್ಳುತ್ತಿದ್ದರಂತೆ..!

Teachers Day 2021: ಭಾರತದಲ್ಲಿ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವೆಂದು ಆಚರಿಸಲಾಗುತ್ತದೆ. ಅದೇ ರೀತಿ ವಿಶ್ವ ಶಿಕ್ಷಕರ ದಿನವನ್ನು ಪ್ರತೀ ವರ್ಷ ಅಕ್ಟೋಬರ್ 5ರಂದು ಆಚರಿಸಲಾಗುತ್ತದೆ. ಈ ದಿನ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಗುರುಗಳು ಮತ್ತ ಮಾರ್ಗದರ್ಶಕರಿಗೆ ಗೌರವ ಮತ್ತು ಕೃತಜ್ಞತೆಯನ್ನು ತೋರಿಸುತ್ತಾನೆ.

ಡಾ.ಸರ್ವಪಲ್ಲಿ ರಾಧಾಕೃಷ್ಣನ್

ಡಾ.ಸರ್ವಪಲ್ಲಿ ರಾಧಾಕೃಷ್ಣನ್

 • Share this:
  ಭಾರತದ ಮೊದಲ ಉಪರಾಷ್ಟ್ರಪತಿ ಹಾಗೂ ಎರಡನೇ ರಾಷ್ಟ್ರಪತಿಯಾಗಿದ್ದ ಮತ್ತು ಶಿಕ್ಷಕ, ತತ್ವಜ್ಞಾನಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ (Dr Sarvepalli Radhakrishnan) ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತೀ ವರ್ಷ ಸೆಪ್ಟೆಂಬರ್ 5ರಂದು ದೇಶಾದ್ಯಂತ ಶಿಕ್ಷಕರ ದಿನವನ್ನು(Teachers Day) ಆಚರಿಸಲಾಗುತ್ತದೆ. ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.

  ಸೆಪ್ಟೆಂಬರ್ 5 ಅಂದರೆ ಇಂದು ಶಿಕ್ಷಕರ ದಿನಾಚರಣೆ(Teachers Day). ಪ್ರತೀ ವರ್ಷ ಸೆ.5ನ್ನು ಭಾರತದಾದ್ಯಂತ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಪ್ರತಿಯೊಬ್ಬ ವಿದ್ಯಾರ್ಥಿಯು(Student) ತಮ್ಮ ಶಿಕ್ಷಕರು(Teachers), ಮಾರ್ಗದರ್ಶಕರು ಮತ್ತು ಜೀವನದಲ್ಲಿ ಯಾವುದೇ ಪಾಠ ಕಲಿಸಿದ ಯಾರಿಗಾದರೂ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಭಾರತದ ಎರಡನೇ ರಾಷ್ಟ್ರಪತಿ ಮತ್ತು ಅತ್ಯುತ್ತಮ ಶಿಕ್ಷಕರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್(Dr Sarvepalli Radhakrishnan) ಅವರ ಜನ್ಮದಿನ(Birthday)ವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ ಶಿಕ್ಷಕರ ದಿನಾಚರಣೆಯು ಹೆಚ್ಚು ವಿಶೇಷವಾಗಿರುತ್ತದೆ. ಏಕೆಂದರೆ ಕೊರೋನಾ(Corona Pandemic) ಕಾರಣದಿಂದ ಬಹಳ ಸಮಯದವರೆಗೆ ಮುಚ್ಚಲ್ಪಟ್ಟಿದ್ದ ಶಾಲೆಗಳು(Schools Reopen) ಹಂತ-ಹಂತವಾಗಿ ಶುರುವಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದು, ಇಂದು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬಹುದಾಗಿದೆ.

  ಡಾ.ರಾಧಾಕೃಷ್ಣನ್ ಅವರ ಎಲ್ಲಾ ಸಾಧನೆಗಳು ಹಾಗೂ ಕೊಡುಗೆಗಳ ಹೊರತಾಗಿಯೂ, ಅವರು ಒಬ್ಬ ಉತ್ತಮ ಶಿಕ್ಷಕರಾಗಿದ್ದರು ಎನ್ನುವುದು ಇಲ್ಲಿ ಗಮನಾರ್ಹ. ತಮ್ಮ ಜೀವನದುದ್ದಕ್ಕೂ ಗುರುಗಳಾಗಿ ಹಲವಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದರು.

  ಭಾರತದಲ್ಲಿ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವೆಂದು ಆಚರಿಸಲಾಗುತ್ತದೆ. ಅದೇ ರೀತಿ ವಿಶ್ವ ಶಿಕ್ಷಕರ ದಿನವನ್ನು ಪ್ರತೀ ವರ್ಷ ಅಕ್ಟೋಬರ್ 5ರಂದು ಆಚರಿಸಲಾಗುತ್ತದೆ. ಈ ದಿನ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಗುರುಗಳು ಮತ್ತ ಮಾರ್ಗದರ್ಶಕರಿಗೆ ಗೌರವ ಮತ್ತು ಕೃತಜ್ಞತೆಯನ್ನು ತೋರಿಸುತ್ತಾನೆ. ಭಾರತದಾದ್ಯಂತ ಎಲ್ಲಾ ಶಾಲೆಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಡಾ.ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಈ ದಿನವನ್ನು ಆಚರಿಸುತ್ತವೆ.

  ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ನಮಗೆಷ್ಟು ಗೊತ್ತು?

  • ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 5, 1888ರಂದು ಆಂಧ್ರಪ್ರದೇಶದ ತಿರುತ್ತಾನಿಯಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಅವರು ತಮ್ಮ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟ ಒಬ್ಬ ಆದರ್ಶಪ್ರಾಯ ಶಿಕ್ಷಕ.

  • ಡಾ.ರಾಧಾಕೃಷ್ಣನ್ ಅವರಿಂದ ಪಾಠ ಕಲಿತ ಅನೇಕ ವಿದ್ಯಾರ್ಥಿಗಳು ಜನಪ್ರಿಯ ಶಿಕ್ಷಕರಾಗಿದ್ದರು. ರಾಧಾಕೃಷ್ಣನ್ ಅವರು ತಮ್ಮ ಜೀವನದ ಅವಧಿಯಲ್ಲಿ ಆಂಧ್ರ ವಿಶ್ವವಿದ್ಯಾಲಯ ಮತ್ತು ಬನಾರಸ್​ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದರು.

  • ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ನಂಬಿಕೆಗಳು ಶಿಕ್ಷನ ಪಡೆಯಲು ಸಾವಿರಾರು ಜನರನ್ನು ಪ್ರೇರೇಪಿಸಿವೆ.

  • ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.

  • ಡಾ.ರಾಧಾಕೃಷ್ಣನ್ ಅವರು 1962ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಾಗ, ಅವರ ಶಿಷ್ಯಂದಿರು ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು ವಿಶೇಷ ದಿನವನ್ನಾಗಿ ಆಚರಿಸಲು ರಾಧಾಕೃಷ್ಣನ್ ಅವರ ಬಳಿ ಕೋರಿದರು. ಆಗ ರಾಧಾಕೃಷ್ಣಬ್​ ಅವರು ಸಮಾಜದಲ್ಲಿ ಶಿಕ್ಷಕರ ಕೊಡುಗೆಯನ್ನು ಗುರುತಿಸಲು, ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಮನವಿ ಮಾಡಿದರು. ‘‘ನನ್ನ ಹುಟ್ಟುಹಬ್ಬವನ್ನು ಆಚರಿಸುವ ಬದಲು, ಸೆ.5ನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿದರೆ, ಅದೇ ನನಗೆ ಹೆಮ್ಮೆಯ ವಿಚಾರ‘‘ ಎಂದು ಹೇಳಿದರು. ಅಂದಿನಿಂದ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

  • ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಭಾರತ ಸರ್ಕಾರ ಅವರಿಗೆ 1954ರಲ್ಲಿ ಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ' ನೀಡಿ ಗೌರವಿಸಿತು.

  • ರಾಧಾಕೃಷ್ಣನ್​ ಅವರು ತಮ್ಮ 86ನೇ ವಯಸ್ಸಿನಲ್ಲಿ ಅಂದರೆ 1975 ಏಪ್ರಿಲ್​ 17 ರಂದು ಚೆನ್ನೈನಲ್ಲಿ ನಿಧನರಾದರು.

  Published by:Latha CG
  First published: