ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಅಂದರೇನು?

Vijayasarthy SN
Updated:October 11, 2018, 9:16 PM IST
ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಅಂದರೇನು?
ಹಲಾಲ್ ಮಾಂಸ
  • Share this:
ನಮ್ಮ ಸುತ್ತಮುತ್ತ ಹಲವು ಮಾಂಸದಂಗಡಿಗಳಲ್ಲಿ ಹಲಾಲ್ ಕಟ್ ಎಂಬ ಪದ ಬಳಕೆಯನ್ನ ನೋಡಿರುತ್ತೀರಿ. ಮುಸ್ಲಿಮರ ಬಹುತೇಕ ಮಾಂಸದಂಗಡಿಗಳು ಹಲಾಲ್ ಕಟ್ ಆಗಿರುತ್ತವೆ. ಮಾಂಸಗಳ ಗುಣಮಟ್ಟ ತೋರಿಸಲು ಹಲವು ಕಂಪನಿಗಳು ಹಲಾಲ್ ಕಟ್ ಪದವನ್ನು ಉಪಯೋಗಿಸುತ್ತವೆ. ಆದರೆ, ಇವತ್ತು ಚೀನಾ ದೇಶದಲ್ಲಿ ಹಲಾಲ್ ಮಾಂಸವನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಹಲಾಲ್ ಮಾಂಸ, ಹಲಾಲ್ ಕಟ್ ಅಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ.

ಹಲಾಲ್ ಮಾಂಸ ಯಾವುದು?

ಇಸ್ಲಾಮ್ ಧರ್ಮಬದ್ಧವಾಗಿರುವ ಆಹಾರ ಕ್ರಮವೇ ಹಲಾಲ್. ಇಸ್ಲಾಮ್ ಧರ್ಮದಲ್ಲಿ ಪರಿಶುದ್ಧ ಆಹಾರವೆಲ್ಲವೂ ಹಲಾಲ್ ಎಂದು ಪರಿಗಣಿಸಲಾಗಿದೆ. ಪರಿಶುದ್ಧತೆ ಇಲ್ಲದ ಆಹಾರವು ಇಸ್ಲಾಮ್​ನಲ್ಲಿ ನಿಷಿದ್ಧ. ಮಾಂಸದ ವಿಚಾರಕ್ಕೆ ಬಂದರೆ ಹಂದಿ, ಮನುಷ್ಯ, ಹುಲಿ, ಸಿಂಹ ಇತ್ಯಾದಿ ಮಾಂಸಗಳು ನಿಷಿದ್ಧವಾಗಿವೆ. ಕಾನೂನುಬದ್ಧವೆನಿಸಿದ ಕುರಿ, ಕೋಳಿ, ಒಂಟೆ, ದನ, ಮೀನು ಇತ್ಯಾದಿ ಪ್ರಾಣಿಗಳ ಮಾಂಸವು ಹಲಾಲ್ ಎನಿಸುತ್ತವೆ. ವಧಿಸುವ ಮುಂಚೆಯೇ ಸತ್ತಿದ್ದ ಪ್ರಾಣಿಗಳು; ವಧಿಸುವ ವೇಳೆ ರೋಗ, ಅನಾರೋಗ್ಯದಿಂದ ಬಳಸುತ್ತಿರುವ ಪ್ರಾಣಿಗಳನ್ನು ಮುಸ್ಲಿಮರು ತಿನ್ನುವಂತಿಲ್ಲ.

ಹಲಾಲ್ ಕಟ್ ಎಂದರೇನು?

ನಾವು ತಿನ್ನುವ ಪ್ರಾಣಿಗಳನ್ನ ಕೊಲ್ಲುವುದಕ್ಕೂ ಇಸ್ಲಾಮ್​ನಲ್ಲಿ ನಿರ್ದಿಷ್ಟ ಕ್ರಮ ಮತ್ತು ನಿಯಮಗಳಿವೆ. ಒಂದೊಂದು ಪ್ರಾಣಿಯ ವಧೆಗೂ ಪ್ರತ್ಯೇಕ ನಿಯಮವಿರುತ್ತದೆ. ಒಂದು ಸಾಮಾನ್ಯ ನಿಯಮವೆಂದರೆ ವಧಿಸಲ್ಪಟ್ಟ ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಬೇಕು. ಸೌದಿಯಲ್ಲಿರುವ ಮೆಕ್ಕಾ ಮಸೀದಿಯತ್ತ ಮುಖ ಮಾಡಿರಬೇಕು. ವಧಿಸುವ ವ್ಯಕ್ತಿಯು ಅಲ್ಲಾಹುವಿನ ನಾಮೋಚ್ಛಾರ ಮಾಡುತ್ತಾ ವಧಿಸಬೇಕು. ತಲೆಯನ್ನು ಒಡೆಯದೆ ಗಂಟಲು ಸೀಳಿ ಸಾಯಿಸಬೇಕು ಎಂಬಿತ್ಯಾದಿ ನಿಯಮಗಳು ಕುರಾನ್​ನಲ್ಲಿ ತಿಳಿಸಲಾಗಿದೆ.

ಒಂದೊಂದು ಪ್ರಾಣಿಯನ್ನು ಸಾಯಿಸುವ ಕ್ರಮದಲ್ಲಿ ವ್ಯತ್ಯಾಸವಿರುತ್ತದೆ. ಆಯಾ ಪ್ರಾಣಿಗೆ ಅನುಗುಣವಾಗಿ ಈ ನಿಯಮವನ್ನ ಮಾಡಲಾಗಿದೆ. ಒಟ್ಟಿನಲ್ಲಿ ಪ್ರಾಣಿಗಳು ಹೆಚ್ಚು ನೋವಿಲ್ಲದೆ ವಧಿಸಲ್ಪಡಬೇಕು ಎಂಬುದು ಕುರಾನ್​ನ ಆಶಯವಾಗಿದೆ.
First published:October 11, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ