• ಹೋಂ
  • »
  • ನ್ಯೂಸ್
  • »
  • ಟ್ರೆಂಡ್
  • »
  • Zika Virus: ಗರ್ಭಿಣಿಯರಿಗೆ ಜೀಕಾ ಅಪಾಯ ಹೆಚ್ಚು, ಮಗುವಿನ ಮೆದುಳನ್ನೇ ಹಾಳು ಮಾಡುತ್ತೆ ವೈರಸ್; ಎಚ್ಚರಿಕೆ ಹೇಗೆ? ವೈದ್ಯರ ವಿವರ ಇಲ್ಲಿದೆ

Zika Virus: ಗರ್ಭಿಣಿಯರಿಗೆ ಜೀಕಾ ಅಪಾಯ ಹೆಚ್ಚು, ಮಗುವಿನ ಮೆದುಳನ್ನೇ ಹಾಳು ಮಾಡುತ್ತೆ ವೈರಸ್; ಎಚ್ಚರಿಕೆ ಹೇಗೆ? ವೈದ್ಯರ ವಿವರ ಇಲ್ಲಿದೆ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Zika Alert: ಈ ಸಾಂಕ್ರಮಿಕ ರೋಗಕ್ಕೆ ಮದ್ದಿಲ್ಲ. ಅದರಲ್ಲೂ ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಜಿಕಾ ವೈರಸ್ ತಡೆಗಟ್ಟಲು ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ.

  • Share this:

Zika Virus: ಕೋವಿಡ್ ನಂತರ ಅತಿ ಹೆಚ್ಚು ಭಯ ಹುಟ್ಟಿಸುತ್ತಿರುವ ಮತ್ತೊಂದು ರೋಗವೆಂದರೆ ಜಿಕಾ ವೈರಸ್.. ಈಗಾಗಲೇ ಕೇರಳ, ಮಹಾರಾಷ್ಟçಗಳಲ್ಲಿ ಹೆಚ್ಚು ಜಿಕಾ ವೈರಸ್ ಪ್ರಕರಣ ದಾಖಲಾಗುತ್ತಿದ್ದು, ಅಲ್ಲಿನ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದೆ.. ಈ ಸಾಂಕ್ರಮಿಕ ರೋಗಕ್ಕೆ ಮದ್ದಿಲ್ಲ. ಅದರಲ್ಲೂ ಈ ವೈರಸ್ ಗರ್ಭಿಣಿಯರಿಗೆ ಹೆಚ್ಚು ಅಪಾಯಕಾರಿ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಜಿಕಾ ವೈರಸ್ ತಡೆಗಟ್ಟಲು ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಿರಿಯ ಪ್ರಸೂತಿ ತಜ್ಞೆ ಡಾ. ಗಾಯತ್ರಿ ಡಿ. ಕಾಮತ್ ವಿವರಿಸಿದ್ದಾರೆ.


ಭ್ರೂಣದ ಮೆದುಳಿನ ಮೇಲೆ ಪರಿಣಾಮ: ಹೌದು, ಸೊಳ್ಳೆಗಳ ಮೂಲಕ ಹರಡುವ ಈ ವೈರಸ್ ಹೆಚ್ಚು, ಗರ್ಭಿಣಿಯರಿಗೆ ಅಪಾಯಕಾರಿಯಾಗಿದೆ. ಗರ್ಭಿಣಿಯರು ಈ ಜಿಕಾ ವೈರಸ್‌ಗೆ ತುತ್ತಾದರೆ ಮೊದಲು ಸಮಸ್ಯೆಯಾಗುವುದೇ ಹುಟ್ಟುವ ಮಗುವಿಗೆ. ಈ ವೈರಸ್‌ನಿಂದ ಭ್ರೂಣಗಳ ಮೆದುಳಿಗೆ ಕ್ರಮಿಸಿ ಮೈಕ್ರೋ ಸೆಫಾಲಿ ಎಂಬ ಗಂಭೀರ ಜನ್ಮ ದೋಷಕ್ಕೆ ಕಾರಣವಾಗಬಹುದು. ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕ್ಷೀಣಿಸಿ, ಮಗು ಆಟಿಸಂ ನಂಥಹ ರೋಗದೊಂದಿಗೆ ಹುಟ್ಟುವ ಸಾಧ್ಯತೆ ಹೆಚ್ಚು. ಜೊತೆಗೆ, ಶ್ರವಣ ಹಾಗೂ ದೃಷ್ಟಿ ದೋಷ, ಕೀಲುಗಳಲ್ಲಿ ಚಲನೆ ಇಲ್ಲದಿರುವುದು, ನರ ಬೆಳವಣಿಗೆಯಲ್ಲಿ ವೈಪರಿತ್ಯ ಸೇರಿದಂತೆ ಹಲವು ರೀತಿಯ ರೋಗಗಳಿಗೆ ಈ ವೈರಸ್ ಕಾರಣವಾಗಬಹುದು. ಗರ್ಭಿಣಿಯಲ್ಲಿ ರೋಗ ನಿರೋಧ ಶಕ್ತಿ ಕಡಿಮೆ ಇದ್ದರಂತೂ ಶಿಶುವಿನ ಪ್ರಾಣಕ್ಕೂ ಎರವಾಗಬಹುದು.


ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಖಾಯಿಲೆಗಳಿಂದ ರಕ್ಷಿಸಿಕೊಳ್ಳೋಕೆ ಹೀಗೆ ಮಾಡಿ


ಚಿಕಿತ್ಸೆ ಏನು?: ಪ್ರಸ್ತುತ ಜಿಕಾ ವೈರಸ್‌ಗೆ ಯಾವುದೇ ನಿಗದಿತ ಚಿಕಿತ್ಸೆಯಾಗಲಿ ಅಥವಾ ಲಸಿಕೆಯಾಗಲಿ ಇಲ್ಲ. ಕೋವಿಡ್ ಲಸಿಕೆ ಹಾಕಿಸಿಕೊಂಡವರಲ್ಲಿ ಜಿಕಾ ವೈರಸ್‌ನಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು ಕಡಿಮೆ ಇದೆ. ಆದರೆ, ಗರ್ಭಿಣಿಯರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಇನ್ನೂ ಅವಕಾಶ ಇಲ್ಲವಾದ್ದರಿಂದ ಹೆಚ್ಚು ಎಚ್ಚರಿಕೆಯಿಂದ ಇರುವುದು ಒಳಿತು.


ಮುನ್ನೆಚ್ಚರಿಕೆ: ಜಿಕಾ ವೈರಸ್ ಹಗಲಿನಲ್ಲಿ ಬರುವ ಸೊಳ್ಳೆಗಳು ಕಚ್ಚುವುದರಿಂದ ಹರಡಲಿದೆ. ಈಗ ಮಳೆಗಾಲವಾದ್ದರಿಂದ ಸೊಳ್ಳೆ ಉತ್ಪತ್ತಿ ಸಹ ಹೆಚ್ಚು. ಹೀಗಾಗಿ ಈ ಸಮಯದಲ್ಲಿ ಅತಿ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ನಿಂವಾರಕ ಕ್ರೀಮ್‌ಗಳ ಬಳಕೆ, ಮೈ ತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ಪರದೆ ಬಳಸುವುದರಿಂದ ಸಾಧ್ಯವಾದಷ್ಟು ತಡೆಗಟ್ಟಬಹುದು. ಮುಖ್ಯವಾಗಿ, ಈ ಕಾಯಿಲೆ ಇರುವ ಜಾಗಕ್ಕೆ ತೆರಳಿದಾಗ ಪತಿಯೊಂದಿಗೆ ಸಂಭೋಗ ನಡೆಸುವ ಕ್ರಿಯೆ ನಡೆಸಬಾರದು. ಮಳೆಗಾಲದಲ್ಲಿ ಗರ್ಭಧರಿಸುವುದು ಒಳ್ಳೆಯದಲ್ಲ.


ಸರ್ಕಾರ ಎಚ್ಚರಿಕೆ ವಹಿಸಲಿ: ವಿಪರೀತ ಸೊಳ್ಳೆಗಳಿರುವ ಪ್ರದೇಶ, ಪಾರ್ಕ್ ನಂತಹ ಜಾಗದಲ್ಲಿ ಸರ್ಕಾರವು ಸೊಳ್ಳೆ ನಿವಾರಕ ಔಷಧಿ ಸಿಂಪಡಣೆ ಮಾಡುವತ್ತ ಹೆಚ್ಚು ಗಮನಹರಿಸಬೇಕು. ಎಲ್ಲಾ ಪ್ರದೇಶಗಳಿಗೆ ಆರೋಗ್ಯ ಕಾರ್ಯಕರ್ತರನ್ನು ಕಳುಹಿಸಿ ಗರ್ಭಿಣಿಯ ಆರೋಗ್ಯದ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜೊತೆಗೆ, ಈ ಅವಧಿಯಲ್ಲಿ ಗರ್ಭಧಾರಣೆ ನಿಲ್ಲಿಸುವ ಬಗ್ಗೆ ಜಾಗೃತಿ ಮೂಡಿಸಬೇಕು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

Published by:Soumya KN
First published: