ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರ್ನಾಟಕಕ್ಕೆ (PM Modi Visits Karnataka) ಆಗಮಿಸುತ್ತಿದ್ದಾರೆ. ಹೌದು, ಭಾರತದ ರಕ್ಷಣಾ ವಲಯಕ್ಕೆ ಉತ್ತೇಜನ ನೀಡುವ ಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi In Karnataka) ಅವರು ಫೆಬ್ರವರಿ 6 ರಂದು ಕರ್ನಾಟಕದ ತುಮಕೂರು (Tumkur) ಜಿಲ್ಲೆಯಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನ ಹೆಲಿಕಾಪ್ಟರ್ ಕಾರ್ಖಾನೆಯನ್ನು (Helicopter Factory In Tumkur) ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಹಾಗಾದರೆ HAL ನ ಹೆಲಿಕಾಪ್ಟರ್ ಕಾರ್ಖಾನೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿವೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನ ಹೆಲಿಕಾಪ್ಟರ್ ಫ್ಯಾಕ್ಟರಿ - ಇದನ್ನು 'ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ' ಎಂದು ಕರೆಯಲಾಗುತ್ತದೆ. ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ತಾಣವಾಗಲಿದೆ. ದೇಶವು ಹೆಲಿಕಾಪ್ಟರ್‌ಗಳನ್ನು ಆಮದು ಮಾಡಿಕೊಳ್ಳದೇ ದೇಶಕ್ಕೆ ಅಗತ್ಯವಾದ ಹೆಲಿಕಾಪ್ಟರ್‌ಗಳನ್ನು ತಯಾರಿಸಲು ಅನುವು ಮಾಡಿಕೊಡುತ್ತದೆ.
615 ಎಕರೆಯಲ್ಲಿ ಹೆಲಿಕಾಪ್ಟರ್ ಕಾರ್ಖಾನೆ
ಈ ಕಾರ್ಖಾನೆಯು ಒಟ್ಟು 615 ಎಕರೆ ಭೂಮಿಯಲ್ಲಿ ನಿರ್ಮಾಣಗೊಂಡಿದೆ. ಮೊದಲ ಹಂತದಲ್ಲಿ ಈ ಕಾರ್ಖಾನೆಯು ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ಗಳನ್ನು (LUHs) ಉತ್ಪಾದಿಸಲಿದೆ. ಇದು ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ವರ್ಗದ, ಏಕ-ಎಂಜಿನ್ ವಿವಿಧೋದ್ದೇಶದ ಹೆಲಿಕಾಪ್ಟರ್ ಆಗಿರಲಿದೆ.
ಇದನ್ನೂ ಓದಿ: Puttur: ಐಸ್ ಕ್ಯಾಂಡಿ ಮಾರಿ 15 ಲಕ್ಷ ಆದಾಯ! ಸೂಜಿಮೆಣಸಿಂದಲೂ ಐಸ್ಕ್ರೀಮ್ ತಯಾರಿ
ಮೊದಲ ವರ್ಷವೇ 30 ಹೆಲಿಕಾಪ್ಟರ್ ಉತ್ಪಾದನೆ
ಈ ಕಾರ್ಖಾನೆಯು ಆರಂಭದಲ್ಲಿ ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುತ್ತದೆ. ನಂತರ ಅದನ್ನು ಹಂತ ಹಂತವಾಗಿ ವರ್ಷಕ್ಕೆ 60 ಮತ್ತು 90 ಕ್ಕೆ ಹೆಚ್ಚಿಸಲಾಗು ಯೋಜನೆಯಿದೆ. ಇದರೊಂದಿಗೆ, ತುಮಕೂರು ಹೆಲಿಕಾಪ್ಟರ್ ಕಾರ್ಖಾನೆಯು ಲಘು ಯುದ್ಧ ಹೆಲಿಕಾಪ್ಟರ್‌ಗಳು (LCH ಗಳು), ಮತ್ತು ಭಾರತೀಯ ಮಲ್ಟಿರೋಲ್ ಹೆಲಿಕಾಪ್ಟರ್‌ಗಳನ್ನು (IMRHs) ಸಹ ಉತ್ಪಾದಿಸುತ್ತದೆ.
ಇದನ್ನೂ ಓದಿ: Bannerghatta: 30 ವರ್ಷಗಳಿಂದ ನಿಂತಿದ್ದ ಮೂಗಮಾರಮ್ಮ ದೇವಿ ಜಾತ್ರೆ ಮತ್ತೆ ಆರಂಭ!
ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ
ಫೆಬ್ರವರಿ 6 ರಿಂದ ಫೆಬ್ರವರಿ 8 ರವರೆಗೆ ಕರ್ನಾಟಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಪ್ರಧಾನಿ ಮೋದಿ ಜಿ 20 ಕಾರ್ಯಕ್ರಮವಾದ ಇಂಡಿಯಾ ಎನರ್ಜಿ ವೀಕ್ ಅನ್ನು ಸಹ ಉದ್ಘಾಟಿಸಲಿದ್ದಾರೆ. ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ