ತುಮಕೂರು: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ (Tumkur News) ಹುಲಿಯ ಮೃತದೇಹವೊಂದು (Tigers Dead Body In Tumkur) ಪತ್ತೆಯಾಗಿದೆ. ಈ ಹಿಂದೆ ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಎಂದೂ ಕೂಡ ಯಾರ ಕಣ್ಣಿಗೂ ಕಾಣದ ಹುಲಿಯೊಂದು ಸಾವನ್ನಪ್ಪಿರುವುದು ತುಮಕೂರು ಜಿಲ್ಲೆಯ ಜನರಲ್ಲಿ ಅಚ್ಚರಿ ಹಾಗೂ ಅನುಮಾನ ಮೂಡಿಸಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದ ಸಿಮೆಂಟ್ ಪೈಪ್ ಒಳಗೆ ಹುಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಸಾವನಪ್ಪಿ ಬಿದ್ದಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ.
ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ
ಹುಲಿ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ನಡೆಸಲಾಗುತ್ತಿದೆ. ಭದ್ರಾ ಅಭಯಾರಣ್ಯದಿಂದ ವೈದ್ಯರ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಜೊತೆಗೆ ಚೇಳೂರು ಪೊಲೀಸರು ಹಾಗೂ ಶಿರಾ ಡಿವೈಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಚಿರತೆ ಓಡಾಟದ ಮಾಹಿತಿ ಬಂದಿತ್ತು!
ಕಳೆದ ಒಂದು ವಾರದಿಂದ ಸುಮಾರು ನಾಲ್ಕು ವರ್ಷದ ಚಿರತೆ ಓಡಾಡುತ್ತಿದೆ ಎಂಬ ಮಾಹಿತಿ ಅರಣ್ಯ ಇಲಾಖೆಗೂ ಲಭ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೂಡ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ: Helicopter Factory In Tumkur: ನಮ್ಮ ತುಮಕೂರಿನಲ್ಲಿ ಭಾರತದಲ್ಲೇ ಅತಿ ದೊಡ್ಡ ಹೆಲಿಕಾಪ್ಟರ್ ಕಾರ್ಖಾನೆ!
ಆ ಸಂದರ್ಭದಲ್ಲಿ ಯಾವುದೇ ಹುಲಿ ಪತ್ತೆಯಾಗಿರಲಿಲ್ಲ. ಇದೀಗ ಹುಲಿಯ ಮೃತದೇಹ ಪತ್ತೆಯಾಗಿದೆ. ಭದ್ರಾ ಅಭಯಾರಣ್ಯದಿಂದ ವೈದ್ಯರು ಸ್ಥಳಕ್ಕೆ ಬಂದು ಶವ ಪರೀಕ್ಷೆ ನಡೆಸಿದ ನಂತರವಷ್ಟೇ ಹುಲಿ ಸಾವಿನ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: Tumkur: ಒಂದೇ ತೆಂಗಿನ ಮರದಲ್ಲಿ 20 ಕವಲು, ಮಾಲೀಕರಿಂದ ಪ್ರತಿದಿನ ಪೂಜೆ!
ಪಕ್ಕದ ಚಿಕ್ಕಮಗಳೂರು ಜಿಲ್ಲೆಯ ಭಾಗದಿಂದ ಇಲ್ಲಿಗೆ ಚಿರತೆ ಬಂದಿರಬಹುದು. ಅಥವಾ ಯಾರಾದ್ರೂ ಚಿರತೆಯನ್ನು ಕೊಂದು ತಂದು ಹಾಕಿದ್ದಾರಾ ಎಂಬ ದೃಷ್ಟಿಕೋನದಲ್ಲೂ ಅರಣ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ