• ಹೋಂ
 • »
 • ನ್ಯೂಸ್
 • »
 • ಉಡುಪಿ
 • »
 • Udupi Viral News: ಕರೆಂಟ್ ಬಿಲ್ ಕಟ್ಟೋದಿಲ್ಲ, ಮೀಟರ್​ ಬೋರ್ಡ್​ಗೆ ಚೀಟಿ ಅಂಟಿಸಿದ ಉಡುಪಿಯ ವ್ಯಕ್ತಿ!

Udupi Viral News: ಕರೆಂಟ್ ಬಿಲ್ ಕಟ್ಟೋದಿಲ್ಲ, ಮೀಟರ್​ ಬೋರ್ಡ್​ಗೆ ಚೀಟಿ ಅಂಟಿಸಿದ ಉಡುಪಿಯ ವ್ಯಕ್ತಿ!

ಚೀಟಿ ಬರೆದ ವ್ಯಕ್ತಿ

ಚೀಟಿ ಬರೆದ ವ್ಯಕ್ತಿ

“ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ” ಎಂದು ಇವರು ತಿಳಿಸಿದ್ದಾರೆ.

 • News18 Kannada
 • 3-MIN READ
 • Last Updated :
 • Udupi, India
 • Share this:

ಉಡುಪಿ: ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಚೀಟಿ ಬರೆದು ವ್ಯಕ್ತಿಯೊಬ್ಬರು ಮೆಸ್ಕಾಂಗೆ ಶಾಕ್ ನೀಡಿದ್ದಾರೆ! ಹೌದು, ಇಂತಹದ್ದೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ (Udupi News) ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್​ ಬೋರ್ಡ್​ಗೆ‘’ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ (Current Bill) ಕೊಡಬೇಡಿ. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ (Udupi Viral News)  ಅಂಟಿಸಿದ್ದಾರೆ.


ನಾನು ಕೂಡ ಫಲಾನುಭವಿ!
ಕಾಂಗ್ರೆಸ್ ಸರ್ಕಾರ ಬಂದರೆ ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ ಎಂದು ಅವರು ತಮ್ಮ ವಾದ ಮಂಡಿಸಿದ್ದಾರೆ.


ಇದನ್ನೂ ಓದಿ: Chitradurga: ನಾವ್ ಕರೆಂಟ್ ಬಿಲ್ ಕಟ್ಟಲ್ಲ; ಗ್ರಾಮಸ್ಥರ ಪಟ್ಟು; ವಿಡಿಯೋ ವೈರಲ್


ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ಹೀಗಾಗಿ ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.




ನಾನಿಲ್ಲದೇ ಇರುವಾಗ ಮೆಸ್ಕಾಂನವರು ಬಂದರೆ?
ಅಲ್ಲದೇ, ಹೀಗೆ ಮೀಟರ್​ ಬೋರ್ಡ್​ಗೆ ಚೀಟಿ ಅಂಟಿಸಿದ ಕಾರಣವನ್ನು ಸಹ ತಿಳಿಸಿದ ಅವರು, “ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: Jobs in News 18 Kannada: ನ್ಯೂಸ್ 18 ಕನ್ನಡದಲ್ಲಿ ಉದ್ಯೋಗಾವಕಾಶ! ನಿಮ್ಮೂರಲ್ಲೇ ಕೆಲಸ ಖಾಲಿ ಇದೆ




ಕರೆಂಟ್ ಬಿಲ್ ಕೊಡಬೇಡಿ ಆಯ್ತಾ?
ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ಹೇಳಿಕೆ ನೀಡಿದ್ದಾರೆ.


ಚಿತ್ರದುರ್ಗದಲ್ಲಿ ಕರೆಂಟ್ ಬಿಲ್ಲ ಕಟ್ಟಲ್ಲ ಎಂದ ಜನರು!’
ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹಾಗಾಗಿ ನಾವು ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಬೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮಸ್ಥರು ವಿದ್ಯುತ್ ಬಿಲ್ ಪಾವತಿಸಲ್ಲ ಎಂದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದಿದೆ. ಅವರ ಬಿಲ್ ಕಟ್ಟುವಂತಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಾವು ಬಿಲ್ ಪಾವತಿಸಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಬಂದಿದ್ದು, ಆದೇಶ ಬರೋವರೆಗೂ ನೀವು ಬಿಲ್ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ. ಅದೆಲ್ಲ ನಮಗೆ ಗೊತ್ತಿಲ್ಲ. ಆದೇಶದ ಬಗ್ಗೆ ಕಾಂಗ್ರೆಸ್​ನವರನ್ನ ಕೇಳಿಕೊಳ್ಳಿ ಎಂದು ಗ್ರಾಮಸ್ಥರು ಹೇಳಿದ್ದಾರೆ.

top videos
  First published: