ಎಸ್.ಟಿ ಸೋಮಶೇಖರ್ ಆಪ್ತ ಸಿಬ್ಬಂದಿಗೆ ಕೊರೋನಾ ಪಾಸಿಟಿವ್; ಸಚಿವರಿಗೆ ಹೋಮ್‌ ಕ್ವಾರಂಟೈನ್, ಕಚೇರಿ ಸೀಲ್‌ಡೌನ್

ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಸಚಿವರಾದ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಸಹ ಕೊರೋನಾದಿಂದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದೀಗ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೋನಾ ದೃಢಪಟ್ಟಿದ್ದು, ಸಚಿವರನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

news18-kannada
Updated:July 28, 2020, 9:23 AM IST
ಎಸ್.ಟಿ ಸೋಮಶೇಖರ್ ಆಪ್ತ ಸಿಬ್ಬಂದಿಗೆ ಕೊರೋನಾ ಪಾಸಿಟಿವ್; ಸಚಿವರಿಗೆ ಹೋಮ್‌ ಕ್ವಾರಂಟೈನ್, ಕಚೇರಿ ಸೀಲ್‌ಡೌನ್
ಎಸ್​.ಟಿ. ಸೋಮಶೇಖರ್​
  • Share this:
ಬೆಂಗಳೂರು (ಜುಲೈ 28); ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೆ, ಅವರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದ್ದು 7 ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

"ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39 ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ" ಎಂದು ಸಚಿವಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಸಚಿವರಾದ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಸಹ ಕೊರೋನಾದಿಂದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದೀಗ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೋನಾ ದೃಢಪಟ್ಟಿದ್ದು, ಸಚಿವರನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಲಾಹೋರ್‌ ಗುರುದ್ವಾರವನ್ನು ಮಸೀದಿಯಾಗಿ ಪರಿವರ್ತಿಸಲು ಮುಂದಾಗಿರುವ ಪಾಕಿಸ್ತಾನ; ಪ್ರತಿಭಟನೆ ದಾಖಲಿಸಿದ ಭಾರತ

ಕರ್ನಾಟದಲ್ಲಿ ಮಾರಕ ಕೋವಿಡ್​-19 ಆರ್ಭಟ ಮುಂದುವರೆದಿದೆ. ಭಾನುವಾರ ಒಂದೇ ದಿನ ಸುಮಾರು 5,324 ಕೇಸ್​​ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್​​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದಂತಾಗಿದೆ. ಇನ್ನೂ ಕೊರೋನಾದಿಂದಾಗಿ ನಿನ್ನೆ ಒಂದೇ ದಿನದಲ್ಲಿ ಸುಮಾರು 75 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ.
Published by: MAshok Kumar
First published: July 28, 2020, 9:23 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading