HOME » NEWS » Uncategorized » CORONAVIRUS POSITIVE CASES INCREASING IN KARNATAKA MORE 6K CASES REPORTED LAST 24 HOOURS RHHSN

Coronavirus | ರಾಜ್ಯದಲ್ಲಿ 6 ಸಾವಿರ ಗಡಿ ದಾಟಿದ ಕೊರೋನಾ ಸಂಖ್ಯೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 45107ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 351 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ದೃಢಪಟ್ಟ ಒಟ್ಟಿ ಪ್ರಕರಣಗಳ ಸಂಖ್ಯೆ 10,26,584 ತಲುಪಿದ್ದು, ಈ ಪೈಕಿ 9,68, 762 ಮಂದಿ ಗುಣಮುಖರಾಗಿದ್ದಾರೆ. ಹಾಗೂ 12, 696 ಮಂದಿ ಸಾವಿಗೀಡಾಗಿದ್ದಾರೆ.

news18-kannada
Updated:April 6, 2021, 6:41 PM IST
Coronavirus | ರಾಜ್ಯದಲ್ಲಿ 6 ಸಾವಿರ ಗಡಿ ದಾಟಿದ ಕೊರೋನಾ ಸಂಖ್ಯೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ
ಕೊರೋನಾ ವೈರಸ್
  • Share this:
ಬೆಂಗಳೂರು: ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಜೋರಾಗಿದ್ದು, ಕೊರೋನಾ ನಿಯಂತ್ರಣ ಸರ್ಕಾರಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ದೇಶವ್ಯಾಪಿ ಕೊರೋನಾ ಸಂಖ್ಯೆ ಲಕ್ಷದ ಗಡಿ ಸಮೀಪಿಸಿದರೆ, ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ನೆನ್ನೆ ಸುಮಾರು 5 ಸಾವಿರದಷ್ಟು ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡುಬಂದರೆ, ಇಂದು ಕೊರೋನಾ ಕೇಸ್​ಗಳ ಸಂಖ್ಯೆ ಆರು ಸಾವಿರ ಗಡಿ ದಾಟಿದೆ. ಸಾವಿನ ಸಂಖ್ಯೆಯಲ್ಲೂ ಹೆಚ್ಚಳ ಕಂಡುಬಂದಿದೆ.

ರಾಜ್ಯದಲ್ಲಿ ಇಂದು 6150 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಾರಕ ಸೋಂಕಿಗೆ ಒಂದೇ ದಿನ 39 ಜನ ಬಲಿಯಾಗಿದ್ದಾರೆ. 3487 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 351 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ ನಾಲ್ಕು ಸಾವಿರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಇಂದು 4266 ಕೇಸ್ ಪತ್ತೆಯಾಗಿವೆ. ಮೃತರಲ್ಲಿ 26 ಮಂದಿ ಬೆಂಗಳೂರಿಗರೇ ಆಗಿದ್ದಾರೆ. 2417 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದದ್ದಾರೆ. ಒಟ್ಟು 32605 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 4266 ಹೊಸ ಪ್ರಕರಣಗಳೂ ವರದಿಯಾಗಿವೆ. ಕಲಬುರಗಿಯಲ್ಲಿ 261 ಪ್ರಕರಣಗಳು, ಮೈಸೂರಿನಲ್ಲಿ 237, ತುಮಕೂರಿನಲ್ಲಿ 157, ಬೀದರ್​ನಲ್ಲಿ 167, ಹಾಸನದಲ್ಲಿ 110, ಹಾಗೂ ಮಂಡ್ಯದಲ್ಲಿ 102 ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 45107ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 351 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ದೃಢಪಟ್ಟ ಒಟ್ಟಿ ಪ್ರಕರಣಗಳ ಸಂಖ್ಯೆ 10,26,584 ತಲುಪಿದ್ದು, ಈ ಪೈಕಿ 9,68, 762 ಮಂದಿ ಗುಣಮುಖರಾಗಿದ್ದಾರೆ. ಹಾಗೂ 12, 696 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನು ಓದಿ: ನೌಕರರು ಕೆಲಸಕ್ಕೆ‌ ಬಾರದಿದ್ದರೆ ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅವಕಾಶ; ಬಿಎಂಟಿಸಿ ಎಂಡಿ ಸಿ. ಶಿಖಾ

ರಾಜ್ಯದಲ್ಲಿ ಈವರೆಗೆ 48.05 ಲಕ್ಷ ಜನರಿಗೆ ಸೋಮವಾರದವರೆಗೆ ಕೋವಿಡ್ -19 ಲಸಿಕೆ ನೀಡಲಾಗಿದೆ. ನಿನ್ನೆ ಮಾತ್ರ 1,95,554 ಜನರಿಗೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 22.5 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 45- 59 ವರ್ಷ ವಯಸ್ಸಿನ 10.4 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದ ನಂತರದ ಸ್ಥಾನದಲ್ಲಿ ನಾವಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ 15 ಲಕ್ಷ ಡೋಸ್ ಲಸಿಕೆಯನ್ನು ಕಳುಹಿಸಿಕೊಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಮಾಹಿತಿ ನೀಡಿದರು.
Youtube Video
ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಮವಾರ ಒಂದೇ ದಿನ 32 ಸಾವಾಗಿದೆ. ಮಧ್ಯವಯಸ್ಕರು, 25 ವರ್ಷದ ಯುವಜನರು ಸಾವಿಗೀಡಾಗಿರುವುದು ಆತಂಕ ಉಂಟುಮಾಡಿದೆ. ಈ ಹಿನ್ನಲೆಯಲ್ಲಿ ಸಾವಿನ ಆಡಿಟ್ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದೆ. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ಬೇಗ ಹರಡುತ್ತಿದೆ. ಇದರ ತೀವ್ರತೆ ಕಡಿಮೆ ಇದೆಯೋ ಅಥವಾ ಹೆಚ್ಚಿದೆಯೋ ಎಂದು ಹೇಳಲು ಈಗಲೇ ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಲು ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.
Published by: HR Ramesh
First published: April 6, 2021, 6:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories