ಸರ್ಕಾರದ ಬಿಗಿ ಕ್ರಮಕ್ಕೆ ಅವಕಾಶ ಮಾಡಿಕೊಡಬೇಡಿ; ಸಾರಿಗೆ ನೌಕರರಿಗೆ ಸಿಎಂ ಬಿಎಸ್​ವೈ ಕಟ್ಟುನಿಟ್ಟಿನ ಎಚ್ಚರಿಕೆ!

ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಬಸ್ ನಿಲ್ದಾಣಗಳಲ್ಲಿ ಬಸ್ ಗಳ ಸಂಖ್ಯೆ ವಿರಳವಾಗಿತ್ತು. ಇದರಿಂದಾಗಿ ಪ್ರಯಾಣಿಕರು ಇವತ್ತೇ ಮುಷ್ಕರ ಬಿಸಿ ಎದುರಿಸುವಂತಾಯಿತು. ನಾಳೆಯಿಂದ ಕೆಲ ಖಾಸಗಿ ಬಸ್ ಗಳ ಪರ್ಯಾಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ.

  • Share this:
ಹುಬ್ಬಳ್ಳಿ; ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಬರದಿದ್ದಲ್ಲಿ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆ ಈಡೇರಿಸಿದ್ದೇವೆ. ಮುಂದೆಯೂ ಸಾರಿಗೆ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಇಷ್ಟಾದರೂ ಮುಷ್ಕರ ಮಾಡುವ ಪಟ್ಟು ಹಿಡಿಯೋದು ಸರಿಯಲ್ಲ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳಲು ಅವಕಾಶ ಮಾಡಿಕೊಡಬಾರದು. ಮುಷ್ಕರದ ನಿರ್ಧಾರ ಕೈ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಎಚ್ಚರಿಕೆಯ ಜೊತೆಗೆ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಕರೆ ಹಿನ್ನೆಲೆಯಲ್ಲಿ ಈಗಾಗಲೇ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲೂ ತಯಾರಿ ಮಾಡಲಾಗಿದೆ. ಪರ್ಮಿಟ್ ಇರುವ ಖಾಸಗಿ ಬಸ್ ಗಳ ಓಡಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈಲು ಸಂಚಾರ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳುವ ಮುನ್ನವೇ ಸಾರಿಗೆ ನೌಕರರು ಮುಷ್ಕರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಮುಷ್ಕರ ನಿರತರ ಮೇಲೆ ಕಠಿಣ ಕ್ರಮ ಖಚಿತ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳಸಾ -ಬಂಡೂರಿ ಯೋಜನೆ ಹೋರಾಟ ಸಮಿತಿ ಮುಖಂಡರು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕಳಸಾ- ಬಂಡೂರಿ ಕಾಮಗಾರಿ ಕೈಗೆತ್ತಿಕೊಂಡು, ಅದಕ್ಕೆ ಮೀಸಲಿಟ್ಟ ಬಜೆಟ್ ಸದ್ಬಳಕೆ ಮಾಡಬೇಕು. ಬೆಳೆ ವಿಮೆ ಪರಿಹಾರದಲ್ಲಿ ಆಗ್ತಿರೋ ತೊಡಕು ನಿವಾರಿಸಬೇಕೆಂದು ಮುಖಂಡ ಸಿದ್ಧು ತೇಜಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ನಂತರ ಯಡಿಯೂರಪ್ಪ ಬೆಳಗಾವಿಗೆ ಪ್ರಯಾಣ ಬೆಳೆಸಿದರು.

ಇದನ್ನು ಓದಿ: ನೌಕರರು ಕೆಲಸಕ್ಕೆ‌ ಬಾರದಿದ್ದರೆ ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅವಕಾಶ; ಬಿಎಂಟಿಸಿ ಎಂಡಿ ಸಿ. ಶಿಖಾ

ಹುಬ್ಬಳ್ಳಿಯಲ್ಲಿ ಇವತ್ತೇ ಮುಷ್ಕರದ ಬಿಸಿ

ಸಾರಿಗೆ ಮುಷ್ಕರದ ಮುನ್ನಾ ದಿನವೇ ಹುಬ್ಬಳ್ಳಿಯಲ್ಲಿ ಪ್ರಯಾಣಿಕರಿಗೆ ಬಿಸಿ ತಟ್ಟಿದೆ. ಉತ್ತರ ಕರ್ನಾಟಕದ ಬಹುತೇಕ ಊರುಗಳ ಸಂಪರ್ಕದ ದ್ವಾರಬಾಗಿಲಿನಂತಿರುವ ಹುಬ್ಬಳ್ಳಿಯಲ್ಲಿ ಹಲವಾರು ರೂಟ್ ಗಳ ಸಾರಿಗೆ ಬಸ್ ಸಂಚಾರ ಬಂದ್ ಆಗಿದೆ. ಕೆಲ ಲಾಂಗ್ ರೂಟ್ ಗಳ ಬಸ್ ಗಳು ಬಂದ್ ಆಗಿವೆ. ಬೆಂಗಳೂರು ಸೇರಿ ಇತರೆ ದೂರದ ಊರುಗಳ ಬಸ್ ಗಳು ಬಂದ್ ಆಗಿದೆ.
ವಾಪಸ್ ಹೊರಟಿರೋ ಬಸ್ ಗಳು ಮಾತ್ರ ಸಂಚಾರ ಮಾಡುತ್ತಿವೆ. ನಾಳೆ ಮುಷ್ಕರ ಇರೋದ್ರಿಂದ ಇಂದಿನಿಂದಲೇ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಹೀಗಾಗಿ ದೂರದ ಊರುಗಳಿಗೆ ತೆರಳೋ ಪ್ರಯಾಣಿಕರು ಪರದಾಡುವಂತಾಯಿತು. ಬಸ್ ಗಳ ಸಂಖ್ಯೆ ಗಣನೀಯ ಇಳಿಮುಖವಾಗಿದೆ.

ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಬಸ್ ನಿಲ್ದಾಣಗಳಲ್ಲಿ ಬಸ್ ಗಳ ಸಂಖ್ಯೆ ವಿರಳವಾಗಿತ್ತು. ಇದರಿಂದಾಗಿ ಪ್ರಯಾಣಿಕರು ಇವತ್ತೇ ಮುಷ್ಕರ ಬಿಸಿ ಎದುರಿಸುವಂತಾಯಿತು. ನಾಳೆಯಿಂದ ಕೆಲ ಖಾಸಗಿ ಬಸ್ ಗಳ ಪರ್ಯಾಯ ವ್ಯವಸ್ಥೆಯನ್ನು  ಜಿಲ್ಲಾಡಳಿತ ಮಾಡಿದೆ.

ವರದಿ - ಶಿವರಾಮ ಅಸುಂಡಿ
Published by:HR Ramesh
First published: