• ಹೋಂ
  • »
  • ನ್ಯೂಸ್
  • »
  • Uncategorized
  • »
  • ಭಾಷೆ ವಿಚಾರದಲ್ಲಿ ಎಚ್ಚರವಾಗಿರಬೇಕು, ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಎಚ್ಚರಿಕೆಯಿಂದ ಇರಬೇಕು; ಎಚ್​ಡಿಕೆ

ಭಾಷೆ ವಿಚಾರದಲ್ಲಿ ಎಚ್ಚರವಾಗಿರಬೇಕು, ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಎಚ್ಚರಿಕೆಯಿಂದ ಇರಬೇಕು; ಎಚ್​ಡಿಕೆ

ಹೆಚ್​.ಡಿ ಕುಮಾರಸ್ವಾಮಿ.

ಹೆಚ್​.ಡಿ ಕುಮಾರಸ್ವಾಮಿ.

ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮುಂದೆ ಓದಿ ...
  • Share this:

    ಬೆಂಗಳೂರು: 2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ವಿಶ್ವದ ಲಿಪಿಗಳ ರಾಣಿ ಎಂದೆಲ್ಲ ವಿನೋಬಾ ಬಾವೆ ಬಣ್ಣಿಸಿದ್ದರು. ಕನ್ನಡ ಭಾಷೆಯನ್ನು ಬಳಸುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಆರೋಪದ ನಡುವೆಯೂ ಒಂದಷ್ಟು ಯುವಪೀಳಿಗೆಯವರು ಕನ್ನಡ ಭಾಷೆಯ ಉಳಿವಿಗಾಗಿ ಅಭಿಯಾನಗಳನ್ನು ಮಾಡುತ್ತಾ, ಆಧುನಿಕ ತಂತ್ರಜ್ಞಾನದಲ್ಲೂ ಕನ್ನಡದ ಉಳಿಸುವಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೆ,  ಇಂತಹ ಭಾಷೆ ಭಾರತದ ಅತ್ಯಂತ ಅಸಹ್ಯಕರ, ಕೊಳಕು ಭಾಷೆ ಎಂದು ಗೂಗಲ್ ಘೋಷಿಸಿತು. ಇದಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾದ ಬಳಿಕ ಗೂಗಲ್ ತನ್ನ ತಪ್ಪನ್ನು ಅರಿತು ಆ ಹೇಳಿಕೆಯನ್ನು ಹಿಂಪಡೆದಿದೆ. ಈ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸಹ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.


    ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ಭಾರತದ ಅತ್ಯಂತ ಕೆಟ್ಟ ಭಾಷೆ ಎಂಬ ಹುಡುಕಾಟಕ್ಕೆ ಕನ್ನಡ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್​ಗೆ ಅಸಾಧ್ಯವೇ? ಎಂದು ಎಚ್​ಡಿಕೆ ಅವರು ಪ್ರಶ್ನೆ ಮಾಡಿದ್ದಾರೆ.



    ಇದನ್ನು ಓದಿ: Kannada Language | ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ!; ಗೂಗಲ್ ವಿರುದ್ಧ ರೊಚ್ಚಿಗೆದ್ದ ಕನ್ನಡಿಗರು


    ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.


    ಇದು ನಿನ್ನ ಭಾಷೆ, ಇದು ದೇಶಭಾಷೆ, ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ ಎಂಬ ಕುವೆಂಪು ಕವಿತೆಯನ್ನು ಟ್ವಿಟರ್​ನಲ್ಲಿ ಎಚ್​ಡಿಕೆ ಪೋಸ್ಟ್ ಮಾಡಿದ್ದಾರೆ.


    ಹೌದು, ನೀವೇನಾದರೂ ಗೂಗಲ್​ ಸರ್ಚ್​ಗೆ ಹೋಗಿ ಭಾರತದ ಅತ್ಯಂತ ಕೊಳಕು ಭಾಷೆ ಯಾವುದು? (which is the ugliest Language in India) ಎಂದು ಸರ್ಚ್ ಮಾಡಿದರೆ ಅಲ್ಲಿ ಬರುವ ಉತ್ತರ ಕನ್ನಡ! ಸುಲಿದ ಬಾಳೆಯ ಹಣ್ಣಿನಂದದಿ, ಕಳೆದ ಸಿಗುರಿನ ಕಬ್ಬಿನಂದದಿ ಇರುವ ಭಾಷೆ ಕನ್ನಡ ಎಂದು ಕ್ರಿ.ಶ. 1675ರಲ್ಲೇ ಮಹಾಕವಿಗಳು ಕನ್ನಡ ಭಾಷೆಯ ಬಗ್ಗೆ ಹಾಡಿ ಹೊಗಳಿದ್ದರು. ಆದರೆ, ಈ ಸುಂದರವಾದ ಭಾಷೆಗೆ ಅಗ್ಲಿಯೆಸ್ಟ್​ ಭಾಷೆ ಎಂದು ಸರ್ಟಿಫಿಕೇಟ್ ನೀಡಿರುವ ಗೂಗಲ್ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.



    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:HR Ramesh
    First published: