HOME » NEWS » Uncategorized » INTERNET TEMPORARILY SUSPENDED AGAIN AT DELHIS SINGHU GHAZIPUR AND TIKRI BORDERS IN WAKE OF CHAKKA JAM CALL MAK

Farmers Protest: ರೈತರ ರಸ್ತೆ ತಡೆ ಹೋರಾಟದ ಹಿನ್ನೆಲೆ; ದೆಹಲಿಯ ಸಿಂಗು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಇಂಟರ್ನೆಟ್ ಸ್ಥಗಿತ

ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ಸಾರ್ವಜನಿಕ ತುರ್ತು ಅಥವಾ ಸಾರ್ವಜನಿಕ ಸುರಕ್ಷತೆ) ನಿಯಮಗಳು 2017 ರ ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟೆಲಿಕಾಂ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

news18-kannada
Updated:February 6, 2021, 10:28 PM IST
Farmers Protest: ರೈತರ ರಸ್ತೆ ತಡೆ ಹೋರಾಟದ ಹಿನ್ನೆಲೆ; ದೆಹಲಿಯ ಸಿಂಗು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಇಂಟರ್ನೆಟ್ ಸ್ಥಗಿತ
ಟಿಕ್ರಿ ಗಡಿಯಲ್ಲಿ ನೀಡಲಾಗಿರುವ ಬಿಗಿ ಪೊಲೀಸ್​ ಭದ್ರತೆ.
  • Share this:
ನವ ದೆಹಲಿ ಫೆಬ್ರವರಿ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಸಿಂಗು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲು ಗೃಹ ಸಚಿವಾಲಯ ಇಂದು ಆದೇಶಿಸಿದೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಇಂದು ರಾಷ್ಟ್ರದಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆ (ಚಕ್ಕಾ ಜಾಮ್) ಹೋರಾಟಕ್ಕೆ ಕರೆ ನೀಡಿದ್ದರು. ಈ ಹೋರಾಟವೂ ಸಹ ಇದೀಗ ಯಶಸ್ವಿಯಾಗಿ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದ 11.49ರ ವರೆಗೆ ಈ ಭಾಗಗಳಲ್ಲಿ ಇಂಟರ್​ನೆಟ್​ ಸೇವೆಯನ್ನು ಕಡಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ಸಾರ್ವಜನಿಕ ತುರ್ತು ಅಥವಾ ಸಾರ್ವಜನಿಕ ಸುರಕ್ಷತೆ) ನಿಯಮಗಳು 2017 ರ ಅಡಿಯಲ್ಲಿ 'ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟೆಲಿಕಾಂ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. ರೈತ ಸಂಘಗಳು ಶನಿವಾರ ನೀಡಿದ 'ಚಕ್ಕಾ ಜಾಮ್' (ರಸ್ತೆ ದಿಗ್ಬಂಧನ) ಕರೆಯನ್ನು ಗಮನದಲ್ಲಿಟ್ಟುಕೊಂಡು ಅಂತರ್ಜಾಲವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣ; ಆರೋಪಿ ಮುನಾವರ್​ಗೆ ಜಾಮೀನು ಮಂಜೂರು, ಆದರೂ ಇಲ್ಲ ಬಿಡುಗಡೆ ಭಾಗ್ಯ!

ಈ ಮೊದಲು, ಜನವರಿ 29 ರಂದು ರಾತ್ರಿ 11 ಗಂಟೆಯಿಂದ ಸಿಂಗು, ಗಾಜಿಪುರ ಮತ್ತು ಟಿಕ್ರಿ ಗಡಿಗಳು ಮತ್ತು ಅವುಗಳ ಪಕ್ಕದ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು ಮತ್ತು ಜನವರಿ 31 ರಂದು ರಾತ್ರಿ 11 ಗಂಟೆಯವರೆಗೆ ಅಂತರ್ಜಾಲ ಕಡಿತ ಜಾರಿಯಲ್ಲಿತ್ತು. ಇದನ್ನು ಫೆಬ್ರವರಿ 2 ರವರೆಗೆ ವಿಸ್ತರಿಸಲಾಯಿತು. ಜನವರಿ 26 ರಂದು ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ವರದಿಯಾಗಿತ್ತು. ಹೀಗಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
Youtube Video

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ 73 ದಿನಗಳಿಂದ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಇಳಿದು ಬರುತ್ತಿಲ್ಲ. ಹೀಗಾಗಿ ಈ ಹೋರಾಟ ಯಾವ ಹಂತ ತಲುಪಲಿದೆ? ಎಂಬುದೇ ಅನಿಶ್ಚಿತತೆಯಿಂದ ಕೂಡಿದೆ ಎನ್ನಲಾಗುತ್ತಿದೆ.
Published by: MAshok Kumar
First published: February 6, 2021, 10:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories