ಮುಂಬೈ (ನವೆಂಬರ್ 24); ಸಮಾಜದಲ್ಲಿ ಕೋಮುದ್ವೇಷವನ್ನು ಹರಡಿದ್ದ ಆರೋಪದ ಮೇಲೆ ಬಂಧನದ ಭೀತಿ ಎದುರಿಸಿದ್ದ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಮುಂಬೈ ಹೈಕೋರ್ಟ್ ಇಂದು ಮಧ್ಯಂತರ ಚಾಮೀನು ನೀಡಿ ಆದೇಶಿಸಿದೆ. ಆದರೆ, ಅವರು ವಿರುದ್ಧ ದಾಖಲಾಗಿರುವ ಕೋಮುದ್ವೇಷ ಮತ್ತು ದೇಶದ್ರೋಹ ಪ್ರಕರಣಗಳಿಗೆ ಸಭಂದಿಸಿದಂತೆ ಜನವರಿ 8 ರಂದು ಮುಂಬೈ ಪೊಲೀಸರ ಎದುರು ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕೋಮು ದ್ವೇಷ ಹರಡಲು ಪ್ರಯತ್ನಿಸಿದ್ದಾರೆ ಎಂಬ ಕಾರಣಕ್ಕೆ ಅವರ ಮೇಲೆ ಮುಂಬೈ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ನಿನ್ನೆ ಬಾಂಬೆ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.
ನಟಿ ಕಂಗನಾ ರಣಾವತ್ ಕಳೆದ ತಿಂಗಳು ಕೋಮುವಾದಿ ಮನಸ್ಥಿತಿಯ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದರು. ಹೀಗಾಗಿ ಇವರು ವಿರುದ್ಧಸಯ್ಯದ್ ಎಂಬುವವರು, "ಕಂಗನಾ ತಮ್ಮ ಆಕ್ಷೇಪಾರ್ಹ ಪೋಸ್ಟ್ಗಳು ಮತ್ತು ಕಮೆಂಟ್ಗಳ ಮೂಲಕ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಕಲಾವಿದರ ನಡುವೆ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ" ಎಂದು ಆರೋಪಿಸಿ ದೂರು ನೀಡಿದ್ದರು.
ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ಎಫ್ಐಆರ್ ದಾಖಲಿಸಲಿಸಿದ್ದರು. ಇವರ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಹ ಪೊಲೀಸರಿಗೆ ನಿರ್ದೇಶನ ನೀಡಿತ್ತು.
ಹೀಗಾಗಿ "ಈ ಎಫ್ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನೀಡಿರುವ ಈ ಆದೇಶವನ್ನು ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ" ಎಂದು ಅವರ ವಕೀಲ ರಿಜ್ವಾನ್ ಸಿದ್ದಿಕಿ ಪಿಟಿಐಗೆ ತಿಳಿಸಿದ್ದಾರೆ.
ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ನವೆಂಬರ್ 23 ಮತ್ತು 24 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಕಂಗನಾ ರಣಾವತ್ ಅವರಿಗೆ ಕಳೆದ ವಾರವೇ ನೋಟಿಸ್ ನೀಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ