Crime News| ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಪೈಶಾಚಿಕ ಕೃತ್ಯ; ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಮೈಸೂರು (ಜುಲೈ 10): ದೇಶ ಮತ್ತು ರಾಜ್ಯದ ನಾನಾ ಮೂಲೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇದೆ. ಈ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸುತ್ತಿರುವುದರ ನಡುವೆಯೇ ಮೈಸೂರು ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆದಿರು ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.

  ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

  ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್​ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.

  ಇದನ್ನೂ ಓದಿ: Petrol Price Today| ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್-ಡೀಸೆಲ್; ನಿಮ್ಮ ನಗರದಲ್ಲಿ ಬೆಲೆ ಎಷ್ಟು?

  ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್​ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: