HOME » NEWS » Uncategorized » MINISTER RAMESH JARKIHOLI SEX TAPE CASE TOMORROW IS AN IMPORTANT NEWS CONFERENCE BY CONGRESS LEADERS MAK

Ramesh Jarkiholi: ಸಚಿವ ರಮೇಶ್​ ಜಾರಕಿಹೊಳಿ ರಾಸಲೀಲೆ ಪ್ರಕರಣ; ನಾಳೆ ಕಾಂಗ್ರೆಸ್​ ಮುಖಂಡರಿಂದ ಮಹತ್ವದ ಸುದ್ದಿಗೋಷ್ಠಿ

ಸಚಿವ ರಮೇಶ್​ ಜಾರಕಿಹೊಳಿ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್​ ಕಲ್ಲಹಳ್ಳಿ ಈಗಾಗಲೇ ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದನ್ನೂ ಬಿಡುಗಡೆ ಮಾಡಿದ್ದಾರೆ.

news18-kannada
Updated:March 2, 2021, 10:08 PM IST
Ramesh Jarkiholi: ಸಚಿವ ರಮೇಶ್​ ಜಾರಕಿಹೊಳಿ ರಾಸಲೀಲೆ ಪ್ರಕರಣ; ನಾಳೆ ಕಾಂಗ್ರೆಸ್​ ಮುಖಂಡರಿಂದ ಮಹತ್ವದ ಸುದ್ದಿಗೋಷ್ಠಿ
ಸಚಿವ ರಮೇಶ್ ಜಾರಕಿಹೋಳಿ.
  • Share this:
ಬೆಂಗಳೂರು (ಮಾರ್ಚ್​ 02); ಸಚಿವ ರಮೇಶ್​ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಪ್ರಸ್ತುತ ಇಡೀ ರಾಜ್ಯ ರಾಜಕೀಯ ಮಾತ್ರವಲ್ಲದೆ ರಾಷ್ಟ್ರೀಯ ರಾಜಕಾರಣದಲ್ಲೂ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಎಲ್ಲಾ ಮಾಧ್ಯಮಗಳಲ್ಲೂ ಈ ಕುರಿತು ಚರ್ಚೆಯಾಗುತ್ತಿದೆ. ಕಾಂಗ್ರೆಸ್​ ನಾಯಕರು ಈಗಾಗಲೇ ಅಶ್ಲೀಲ ದೃಶ್ಯಗಳಲ್ಲಿ ಕಾಣಿಸಿಕೊಂಡಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇನ್ನೂ ಎರಡು ದಿನಗಳಲ್ಲಿ ರಾಜ್ಯದಲ್ಲಿ ಬಜೆಟ್​ ಮೇಲಿನ ಅಧಿವೇಶನ ಆರಂಭವಾಗಲಿದ್ದು, ಇಂತಹ ಸಂದರ್ಭದಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಅವರ ಅಶ್ಲೀಲ ವಿಡಿಯೋ ಬಿಡುಗಡೆಯಾಗಿರುವುದು ರಾಜ್ಯ ಸರ್ಕಾರಕ್ಕೂ ಮುಜಗರ ಉಂಟು ಮಾಡಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಮೇಶ್​ ಜಾರಕಿಹೊಳಿ ಅವರ ರಾಜೀನಾಮೆ ಕೇಳಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ನಾಯಕರು ಪತ್ರಿಕಾಗೋಷ್ಠಿ ಕರೆದಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ನಾಳೆ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ವಕ್ತರರಾದ ಬ್ರಿಜೇಶ್ ಕಾಳಪ್ಪ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದ್ದು, ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಮತ್ತು ಅವರ ರಾಜೀನಾಮೆ ಪಡೆಯಬೇಕು ಎಂದು ಕಾಂಗ್ರೆಸ್​ ನಾಯಕರು ಒತ್ತಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಚಿವ ರಮೇಶ್​ ಜಾರಕಿಹೊಳಿ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್​ ಕಲ್ಲಹಳ್ಳಿ ಈಗಾಗಲೇ ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದನ್ನೂ ಬಿಡುಗಡೆ ಮಾಡಿದ್ದಾರೆ.

ಮಹಿಳೆಯೊಂದಿಗಿನ ರಾಸಲೀಲೆ ದೃಶ್ಯಗಳು ಸಿಡಿಯಲ್ಲಿ ದಾಖಲಾಗಿದ್ದು, ಸಂತ್ರಸ್ತೆ ಪರ ದಿನೇಶ್​ ಕಲ್ಲಹಳ್ಳಿ ದೂರು ನೀಡಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ಸಂತ್ರಸ್ಥೆಗೆ ಭಯದ ವಾತಾವರಣ ಇದೆ. ಹಾಗಾಗಿ ಆಕೆ ಮಾಧ್ಯಮದ ಮುಂದೆ ಬರುತ್ತಿಲ್ಲ. ದೂರು ಕೊಟ್ಟ ಬಳಿಕ ಎಲ್ಲವನ್ನು ಹೇಳುತ್ತೇನೆ ಎಂದು ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಸಲೀಲೆ ಪ್ರಕರಣ: ಸರ್ಕಾರದಲ್ಲಿ ಇಂಥವರೆಲ್ಲ ಇರಬೇಕು ಎಂದು ವ್ಯಂಗ್ಯವಾಡಿದ ಡಿಕೆ ಶಿವಕುಮಾರ್​​ಈ ಪ್ರಕರಣ ಇದೀಗ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ನಡುವೆ ನ್ಯೂಸ್​ 18ಗೆ ಹೇಳಿಕೆ ನೀಡಿರುವ ಸಚಿವ ರಮೇಶ್​ ಜಾರಕಿಹೊಳಿ, "ಆ ಮಹಿಳೆ ಯಾರೆಂದೆ ನನಗೆ ಗೊತ್ತಿಲ್ಲ. ದೃಶ್ಯದಲ್ಲಿ ಕಾಣಿಸಿಕೊಂಡಿರುವುದು ನಾನಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಈ ಕುರಿತು ಸಮಗ್ರ ತನಿಖೆ ಆಗಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ" ಎಂದು ಹೇಳಿಕೆ ನೀಡಿದ್ದಾರೆ.
Youtube Video
ಹೀಗಾಗಿ ನಾಳೆ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್​ ನಾಯಕರು ಯಾವ ವಿಚಾರವನ್ನು ಮಾತನಾಡಲಿದ್ದಾರೆ? ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಈ ಸಂಬಂಧ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
Published by: MAshok Kumar
First published: March 2, 2021, 10:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories