ಬಯಲು ಸೀಮೆ ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿಯಿಂದ 10 ಟಿಎಂಸಿ ನೀರು; ಸಚಿವ ಸುಧಾಕರ್‌ ಭರವಸೆ

ಬಯಲು ಸೀಮೆ ಭಾಗವಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದೊಡ್ಡ ಬಳ್ಳಾಪುರದಲ್ಲಿ ಸಾಕಷ್ಟು ನೀರಿನ ಸಮಸ್ಯೆ ಇದೆ. ಹೀಗಾಗಿ ನೆರೆಯ ಆಂಧ್ರಪ್ರದೇಶದ ಕೃಷ್ಣಾ ನದಿಯಿಂದ ಇಲ್ಲಿಗೆ 10 ಟಿ.ಎಂ.ಸಿ ನೀರು ಹರಿಸುವ ಹಾಗೂ ಆ ಮೂಲಕ ಕೆರೆ ಕಟ್ಟೆಗಳನ್ನು ತುಂಬಿಸುವ ಕುರಿತು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

news18-kannada
Updated:July 30, 2020, 10:55 AM IST
ಬಯಲು ಸೀಮೆ ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿಯಿಂದ 10 ಟಿಎಂಸಿ ನೀರು; ಸಚಿವ ಸುಧಾಕರ್‌ ಭರವಸೆ
ಕೆ.ಸುಧಾಕರ್
  • Share this:
ಚಿಕ್ಕಬಳ್ಳಾಪುರ (ಜುಲೈ 30); ಆಂದ್ರಪ್ರದೇಶದ ಕೃಷ್ಣಾ ನದಿಯಿಂದ ಬಯಲು ಸೀಮೆ ಚಿಕ್ಕಬಳ್ಳಾಪುರಕ್ಕೆ 10 ಟಿ.ಎಂ.ಸಿ ನೀರು ಹರಿಸುವ ಕುರಿತು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆಗೆ ಅವಕಾಶ ಕೇಳಲಾಗಿದೆ ಎಂದು ಸಚಿವ ಕೆ. ಸುಧಾಕರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಅವರು, "ಬಯಲು ಸೀಮೆ ಭಾಗವಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದೊಡ್ಡ ಬಳ್ಳಾಪುರದಲ್ಲಿ ಸಾಕಷ್ಟು ನೀರಿನ ಸಮಸ್ಯೆ ಇದೆ. ಹೀಗಾಗಿ ನೆರೆಯ ಆಂಧ್ರಪ್ರದೇಶದ ಕೃಷ್ಣಾ ನದಿಯಿಂದ ಇಲ್ಲಿಗೆ 10 ಟಿ.ಎಂ.ಸಿ ನೀರು ಹರಿಸುವ ಹಾಗೂ ಆ ಮೂಲಕ ಕೆರೆ ಕಟ್ಟೆಗಳನ್ನು ತುಂಬಿಸುವ ಕುರಿತು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಲು ಅವಕಾಶ ಕೇಳಲಾಗಿದೆ.

ಚಿಕ್ಕಬಳ್ಳಾಪುರ ಗಡಿವರೆಗೆ ಹರಿಯುವ ನೀರನ್ನು ಜಿಲ್ಲೆಗೂ ನೀಡುವಂತೆ ಸಭೆಯಲ್ಲಿ ಮನವಿ ಮಾಡಲಿದ್ದೇವೆ. ಈ ಕುರಿತು ರಾಜ್ಯ ನೀರಾವರಿ ಸಚಿವ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆಗೂ ಮಾತುಕತೆ ನಡೆಸಲಾಗಿದೆ. ಇನ್ನೂ ನೆರೆಯ ರಾಜ್ಯದ ಸಿಎಂಗಳ ಮನವೊಳಿಸಿ ಜಿಲ್ಲೆಗೆ ನೀರು ತರಲಾಗುವುದು" ಎಂದು ಡಾ|ಕೆ. ಸುಧಾಕರ್‌ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಅಭಿವೃದ್ಧಿಯ ಕುರಿತು ಮಾತನಾಡಿರುವ ಅವರು, "ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜಿಲ್ಲೆಯಲ್ಲಿ ಕೈಗಾರಿಕೆ, ಶಿಕ್ಷಣ,  ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯ ಎಲ್ಲಾ ನಗರಗಳಲ್ಲಿ ಉತ್ತಮ ಉದ್ಯಾನ ನಿರ್ಮಾಣ ಮಾಡಲು  ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತದೆ.

ಇದನ್ನೂ ಓದಿ : IAF Rafale: ರಫೇಲ್‌ ಹಗರಣ?; ಕೇಂದ್ರ ಸರ್ಕಾರದ ಎದುರು ಮತ್ತೆ ಮೂರು ಪ್ರಶ್ನೆಗಳನ್ನಿಟ್ಟ ರಾಹುಲ್‌ ಗಾಂಧಿ

ಅಲ್ಲದೆ, ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿನ ಕಟ್ಟಡ   ನಿರ್ಮಾಣವಾಗುತ್ತಿದ್ದು ಮುಂದಿನ ವರ್ಷದಿಂದ ಕಾಲೇಜು ಪ್ರಾರಂಭಿಸಲಾಗುವುದು. ಆಯುಷ್ ಆಸ್ಪತ್ರೆಗೆ ಈಗಾಗಲೇ ರಾಜ್ಯ ಸರ್ಕಾರದಿಂದ 10 ಕೋಟಿ ಹಣ ಬಿಡುಗಡೆಯಾಗಿದೆ. 50 ಹಾಸಿಗೆಗಳುಳ್ಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ" ಎಂದು ಸುಧಾಕರ್‌ ತಿಳಿಸಿದ್ದಾರೆ.
Published by: MAshok Kumar
First published: July 30, 2020, 10:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading