news18-kannada Updated:November 19, 2020, 4:33 PM IST
ಮುಂಬೈ ದಾಳಿಯ ಸಂಚುಕೋರ ಹಫೀಜ್ನನ್ನು ಕಳೆದ ವರ್ಷ ಜುಲೈ 17ರಂದು ಬಂಧಿಸಿಡಲಾಗಿತ್ತು. ಎರಡು ಕಡೆಗಳಲ್ಲಿ ಭಯೋತ್ಪಾದನೆಗೆ ಹಣ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡುತ್ತಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 26/11ರ ದಾಳಿಯ ಸಂಚುಕೋರ ಹಾಗೂ ಜಮಾತ್-ಉದ್-ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ಜೊತೆ ಹಫೀಜ್ನ ಮೂರು ಸಹಚರರಿಗೂ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಮುಂಬೈ ದಾಳಿಯ ಸಂಚುಕೋರ ಹಫೀಜ್ನನ್ನು ಕಳೆದ ವರ್ಷ ಜುಲೈ 17ರಂದು ಬಂಧಿಸಿಡಲಾಗಿತ್ತು. ಎರಡು ಕಡೆಗಳಲ್ಲಿ ಭಯೋತ್ಪಾದನೆಗೆ ಹಣ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಬೇರೆ ಎರಡು ಪ್ರಕರಣಗಳಲ್ಲಿ ಕೋರ್ಟ್ ಈತನಿಗೆ ಮತ್ತೆ 10 ವರ್ಷ ಜೈಲು ಶಿಕ್ಷೆ ನೀಡಿದೆ.
ಹಫೀಜ್ ಹಾಗೂ ಆತನ ಇಬ್ಬರು ಸಹಚರರಾದ ಜಫರ್ ಇಕ್ಬಾಲ್ ಹಾಗೂ ಯಹ್ಯಾ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ಹಾಗೂ ಹಫೀಜ್ ಭಾವ ಅಬ್ದುಲ್ ರೆಹ್ಮಾನ್ಗೆ 6 ತಿಂಗಳು ಜೈಲು ಶಿಕ್ಷೆ ನೀಡಿದೆ.
ಹಫೀಜ್ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 24 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳಿ ವೇಳೆ 166 ಜನರು ಮೃತಪಟ್ಟಿದ್ದರು. ಈ ದಾಳಿಯ ಮುಖ್ಯ ರುವಾರಿ ಹಫೀಜ್ ಆಗಿದ್ದ.
Published by:
Rajesh Duggumane
First published:
November 19, 2020, 4:33 PM IST