ದೇಶದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ; ಮದ್ರಾಸ್​ ಹೈಕೋರ್ಟ್​ ಛೀಮಾರಿ

COVID-19 ರ ಎರಡನೇ ತರಂಗಕ್ಕೆ ಚುನಾವಣಾ ಆಯೋಗ ಏಕೈಕ ಕಾರಣವಾಗಿದೆ. ನಿಮ್ಮ ಅಧಿಕಾರಿಗಳ ಮೇಲೆ ಏಕೆ ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಬಾರದು? ಎಂದು ಮದ್ರಾಸ್​ ಹೈಕೋರ್ಟ್​ ಪ್ರಶ್ನಿಸಿದೆ.

ಮದ್ರಾಸ್​ ಹೈಕೋರ್ಟ್​.

ಮದ್ರಾಸ್​ ಹೈಕೋರ್ಟ್​.

 • Share this:
  ಚೆನ್ನೈ (ಏಪ್ರಿಲ್ 26); ದೇಶದಾದ್ಯಂತ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಅಪಾರ ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪುತ್ತಿದ್ಧಾರೆ. ಈ ನಡುವೆ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಛೀಮಾರಿ ಹಾಕಿರುವ ಮದ್ರಾಸ್​ ಹೈಕೋರ್ಟ್​, "ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ. ಸಂದಿಗ್ಧ ಸಂದರ್ಭದಲ್ಲಿ 5 ರಾಜ್ಯಗಳ ಚುನಾವಣೆಯಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವ ಮೂಲಕ ಚುನಾವಣಾ ಆಯೋಗ ಸ್ವತಃ ಕೊರೋನಾ ಹರಡಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ವಿರುದ್ಧ ಏಕೆ ಕೊಲೆ ಪ್ರಕರಣ ದಾಖಲಿಸಬಾರದು?" ಎಂದು ಹರಿಹಾಯ್ದಿದೆ. ಅಲ್ಲದೆ, ಇತ್ತೀಚೆಗೆ ಮುಗಿದ ತಮಿಳುನಾಡು ವಿಧಾನಸಭಾ ಚುನಾವಣಾ ಮತ ಎಣಿಕೆಗೂ ತಡೆ ಒಡ್ಡುವ ಬೆದರಿಕೆ ಹಾಕಿದೆ.

  ಇಂದು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿರುವ ಮದ್ರಾಸ್​ ಹೈಕೋರ್ಟ್​, "COVID-19 ರ ಎರಡನೇ ತರಂಗಕ್ಕೆ ಚುನಾವಣಾ ಆಯೋಗ ಏಕೈಕ ಕಾರಣವಾಗಿದೆ. ನಿಮ್ಮ ಅಧಿಕಾರಿಗಳ ಮೇಲೆ ಏಕೆ ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಬಾರದು?. ನ್ಯಾಯಾಲಯದ  ಆದೇಶದ ಹೊರತಾಗಿಯೂ ಪ್ರಚಾರದ ಸಮಯದಲ್ಲಿ ಮುಖವಾಡಗಳು, ಸ್ಯಾನಿಟೈಸರ್​ಗಳ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲಾ ಕೋವಿಡ್ ಸುರಕ್ಷತಾ ನಿಯಮಗಳನ್ನು ಜಾರಿಗೆ ತರವಲ್ಲಿ ಚುನಾವಣಾ ಸಂಸ್ಥೆ ವಿಫಲವಾಗಿದೆ" ಎಂದು ಹೈಕೋರ್ಟ್ ಹೇಳಿದೆ.

  "ಚುನಾವಣಾ ರ್ಯಾಲಿಗಳು ನಡೆದಾಗ ನೀವು ಇನ್ನೊಂದು ಗ್ರಹದಲ್ಲಿ ಇದ್ದಿರೇ?" ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

  ಮೇ.2 ರಂದು ತಮಿಳುನಾಡಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಆದರೆ,  ಶುಕ್ರವಾರದೊಳಗೆ ಕೋವಿಡ್ ನಿಯಮಗಳನ್ನು ಜಾರಿಗೊಳಿಸುವ ಯೋಜನೆಯನ್ನು ಚುನಾವಣಾ ಆಯೋಗದ ಬಳಿ ಹೈಕೋರ್ಟ್ ಕೇಳಿದೆ. ಒಂದು ವೇಳೆ ಚುನಾವಣಾ ಆಯೋಗ ಈ ನೀಲನಕ್ಷೆಯನ್ನು ನೀಡದಿದ್ದರೆ ಮತ ಎಣಿಕೆಯನ್ನೇ ನಿಲ್ಲಿಸುವುದಾಗಿಯೂ ಎಚ್ಚರಿಸಿದೆ.

  "ಸಾರ್ವಜನಿಕ ಆರೋಗ್ಯವು ಅತ್ಯುನ್ನತವಾದುದು. ಸಾಂವಿಧಾನಿಕ ಅಧಿಕಾರಿಗಳನ್ನು ನೆನಪಿಸಬೇಕಾಗಿರುವುದು ದುಃಖಕರವಾಗಿದೆ. ನಾಗರಿಕನು ಬದುಕುಳಿದಾಗ ಮಾತ್ರ ಅವನು ಪ್ರಜಾಪ್ರಭುತ್ವ ಗಣರಾಜ್ಯವು ಖಾತರಿಪಡಿಸುವ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗುತ್ತದೆ" ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

  ಕರೂರ್ ಕ್ಷೇತ್ರದ ಎಣಿಕೆ ಸಭಾಂಗಣಗಳಲ್ಲಿ ಕೋವಿಡ್ ಅನುಸರಣೆ ಕೋರಿ ತಮಿಳುನಾಡು ಸಾರಿಗೆ ಸಚಿವ ಎಂ.ಆರ್.ವಿಜಯಬಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಹೀಗೊಂದು ಎಚ್ಚರಿಕೆ ನೀಡಿದೆ.

  ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆದ ಚುನಾವಣೆಗಳ ನಂತರ ದೇಶದಲ್ಲಿ ಕೋವಿಡ್ ಪ್ರಕರಣಗಳು ಸ್ಫೋಟಗೊಂಡಿವೆ. ಪ್ರಸ್ತುತ ಭಾರತದಲ್ಲಿ ದಿನವೊಂದಕ್ಕೆ 3.52 ಲಕ್ಷ ಪ್ರಕರಣಗಳು ಮತ್ತು 2,812 ಸಾವುಗಳು ವರದಿಯಾಗಿದೆ.  ಕರ್ನಾಟಕದಲ್ಲಿ ಲಾಕ್​ಡೌನ್:

  ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಭೀಕರತೆಗೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ವೀಕೆಂಡ್ ಕರ್ಫ್ಯೂ ಯಶಸ್ಸಿನ ಬೆನ್ನಲ್ಲೇ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ಡೌನ್ ಹೇರಲು ಸರ್ಕಾರ ನಿರ್ಧರಿಸಿದೆ.

  ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. 2 ವಾರಗಳ ಕಾಲ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು. 2 ವಾರದಲ್ಲಿ ಕೊರೋನಾ ಕಂಟ್ರೋಲ್ಗೆ ಬರದಿದ್ದರೆ ಲಾಕ್ಡೌನ್ ಮುಂದುವರೆಯುವ ಸುಳಿವನ್ನು ಕೊಟ್ಟರು.

  ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ 14 ದಿನಗಳ ಕಾಲ ಲಾಕ್​ಡೌನ್​; ಬೆ.6-10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ!

  ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಸಾರ್ವನಿಕರು ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಬೆಳಗ್ಗೆ 10 ಗಂಟೆಯಿಂದ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿರಲಿದೆ. ದಿನ ಬಳಕೆ ವಸ್ತುಗಳು ಬಿಟ್ಟು, ಉಳಿದ ಎಲ್ಲದಕ್ಕೂ ನಿರ್ಬಂಧವಿರಲಿದೆ. ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ನೀಡಲಾಗಿದೆ. ಬಾರ್ಗಳಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮದ್ಯವನ್ನು ಪಾರ್ಸೆಲ್ ತೆಗೆದುಕೊಳ್ಳಬಹುದು.

  ಇನ್ನು ಸರಕು ಸಾಗಾಣಿಕೆ ವಾಹನಗಳಿಗೆ ಯಾವುದೇ ತೊಂದರೆ ಇರೋಲ್ಲ. ಹೊರ ರಾಜ್ಯ ಸರಕು ಸಾಗಾಣಿಕೆ ವಾಹನಗಳ ಓಡಾಟಕ್ಕೆ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕ ಸಾರಿಗೆ ಇರೋದಿಲ್ಲ. ಸರ್ಕಾರಿ ಬಸ್ಗಳು ರಸ್ತೆಗಿಳಿಯಲ್ಲ. ಗಾರ್ಮೆಂಟ್ಸ್ ನೌಕರರನ್ನು ಹೊರತುಪಡಿಸಿ ಮೆಡಿಕಲ್ , ಕೃಷಿ ಚಟುವಟಿಗಳು, ಕೈಗಾರಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.
  Published by:MAshok Kumar
  First published: