Yogi ಪ್ರೇರಣೆ: ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ 50 ಸಂತರು ಕಣಕ್ಕೆ; ಬ್ರಹ್ಮಾನಂದ ಸ್ವಾಮೀಜಿ

ರಾಜ್ಯಾಂಗದಲ್ಲಿ ಕಾರಣ ಸಮಗ್ರ ಬದಲಾವಣೆ ಆಗಬೇಕು. ಹೀಗಾಗಿ ನಾವು ಸನ್ಯಾಸಿಗಳು ತಯಾರಾಗಿದ್ದೇವೆ. ಇದಕ್ಕೆ ನಮಗೆ ಆದಿತ್ಯನಾಥರ ಪ್ರೇರಣೆ.

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

  • Share this:
ಕಾರವಾರ (ಏ. 18):  ರಾಮ ರಾಜ್ಯದ (Ram Rajya) ಪರಿಕಲ್ಪನೆಯಲ್ಲಿ ಹೊಸ ಸಂಸ್ಥೆಯೊಂದನ್ನು ಹುಟ್ಟು ಹಾಕುತ್ತೇವೆ. ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ (Karnataka Assembly Election) ಭಟ್ಕಳದಲ್ಲೇ ಬ್ರಹ್ಮಾನಂದರು ಈ ಪ್ರಯೋಗ ಮಾಡುತ್ತಾರೆ. ಚುನಾವಣೆ ಪ್ರಚಾರಕ್ಕೆ ನೀವ್ಯಾರು ಬೇಡ, ನನ್ನ 5 ಲಕ್ಷ ನಾಗಾಸಾಧುಗಳು ಬರುತ್ತಾರೆ ಎಂದು ನಾಮಧಾರಿ ಕುಲಗುರುಗಳಾದ, ಉಜಿರೆ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಿಸಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ 6ನೇ ದಿನದ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಪ್ರಜೆಗಳನ್ನ ತಮ್ಮ ಮಕ್ಕಳಂತೆ ಕಾಣುವ ಕೆಲಸವಾಗಬೇಕು. ನಾವು ಇಡೀ ದೇಶವನ್ನು ಸುತ್ತುವ ಸಂತರು. ನಮ್ಮದು ಒಂದು ಜುನಾಕಾರವಿದೆ. ಸುಮಾರು 5 ಲಕ್ಷ ಸಾಧು- ಸಂತರುಗಳಲ್ಲಿ ನಾನೂ ಒಬ್ಬ. ನಾವು ಎರಡು- ಮೂರು ತಿಂಗಳಿಗೆ ಕುಳಿತು ಮಾತನಾಡುತ್ತೇವೆ. ಈ ರಾಜ್ಯಾಂಗದ ವ್ಯವಸ್ಥೆ ದಿಕ್ಕು ತಪ್ಪುತ್ತಿದೆ ಎಂಬ ಕಳವಳ ವ್ಯಕ್ತವಾಗಿದೆ. ಈ ಹಿನ್ನಲೆ ಈ ನಿರ್ಧಾರ ನಡೆಸಿದ್ದೇವೆ

 ಯೋಗಿ ಆದಿತ್ಯನಾಥ್​ ಪ್ರೇರಣೆ

ವಿಧಾನಸಭೆಯಲ್ಲಿ ಮಾರ್ಕೆಟ್‌ನಲ್ಲಿ ಗಲಾಟೆ ಆದಂತೆ ಆಗುತ್ತದೆ. ಎಷ್ಟೋ ಸಲ ನಮ್ಮ ವಿಧಾನಸಭಾಧ್ಯಕ್ಷರಾದವರ ಪರಿಸ್ಥಿತಿ ನೋಡಿದಾಗ ಬೇಸರವಾಗುತ್ತದೆ. ಅದನ್ನು ನೋಡಿದರೆ ಸಂವಿಧಾನ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ, ರಾಜ್ಯಾಂಗದ ಪರಿಕಲ್ಪನೆ ಇದೆಯೇ ಇಲ್ಲವೋ ಗೊತ್ತಾಗುವುದಿಲ್ಲ. ಇದಕ್ಕೆಲ್ಲ ಕಾರಣ ಸಮಗ್ರ ಬದಲಾವಣೆ ಆಗಬೇಕು. ಹೀಗಾಗಿ ನಾವು ಸನ್ಯಾಸಿಗಳು ತಯಾರಾಗಿದ್ದೇವೆ. ಇದಕ್ಕೆ ನಮಗೆ ಆದಿತ್ಯನಾಥರ ಪ್ರೇರಣೆ. ಉತ್ತರಾಖಂಡದಲ್ಲಿ ಈ ಬಗ್ಗೆ ಅನೇಕ ಸಭೆಗಳನ್ನೂ ನಡೆಸಿದ್ದೇವೆ ಎಂದರು.

ಕಡಿಮೆ ಓದಿದವರು ರಾಜ್ಯದ ಕಾನೂನು ಹೇಗೆ ಮಾಡುತ್ತಾರೆ

ರಾಜ್ಯಾಂಗ, ಸಂವಿಧಾನ ಏನೆಂದೇ ನಮ್ಮ ನಾಯಕರುಗಳಿಗೆ ಗೊತ್ತಿಲ್ಲ. ರಾಜಕೀಯಕ್ಕೆ ಬರುವುದೇ ಸುಖಕ್ಕಾಗಿ, ಪ್ರಚಾರಕ್ಕಾಗಿ, ದುಡ್ಡಿಗಾಗಿ ಎಂಬುದು ಒಬ್ಬ ಗ್ರಾಮ ಪಂಚಾಯತಿ ಸದಸ್ಯನಿಂದ ಹಿಡಿದು ಎಲ್ಲರ ಪರಿಕಲ್ಪನೆಯಾಗಿದೆ. ಕಾನೂನು ಗೊತ್ತಿಲ್ಲದವರು ರಾಜ್ಯಾಂಗದೊಳಗೆ ಬಂದು ಕಾನೂನು ಮಾಡಲು ಹೇಗೆ ಸಾಧ್ಯ? ಹೀಗಾಗಿ ತಿದ್ದುಪಡಿಯೊಂದನ್ನು ಮಾಡಬೇಕು. ಯಾರೇ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಆತ ಕನಿಷ್ಠ ಪದವಿಯನ್ನಾದರೂ ಪಡದಿರಬೇಕು. ಮಂತ್ರಿಯಾಗಲು ಕಾನೂನು ವಿದ್ವಾಂಸರೇ ಆಗಿರಬೇಕು. 4ನೇ ಕ್ಲಾಸು, 10ನೇ ಕ್ಲಾಸು ಓದಿದವರನ್ನ ಮಂತ್ರಿ ಮಾಡಿದರೆ ರಾಜ್ಯದ ಕಾನೂನುಗಳನ್ನು ಹೇಗೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

ಇದನ್ನು ಓದಿ: ರಾಜಧಾನಿಯಲ್ಲಿ ಸಂಜೆ ವೇಳೆ ಮಳೆ ಅಬ್ಬರ; ಧರೆಗೆ ಉರುಳಿದ ನಾಲ್ಕು ಮರ

ರಾಜಕೀಯದ ಆಸೆ ಇಲ್ಲ ಆದರೆ, ಬದಲಾವಣೆ ಬೇಕು

ನಾವು ಬೇಸತ್ತು ಹೋಗಿದ್ದೇವೆ. ನಿಮಗೆ ರಿಪೇರಿ ಮಾಡಲು ಬರುತ್ತಿಲ್ಲ. ಇದು ದುಃಖ ಆಗುತ್ತಿದೆ. ನಮಗೆ ಸಂಬಳ ಕೊಡುವುದು ಬೇಡ. ನಮಗೆ ಪಡಿತರ ಅಥವಾ ಊಟ ಕೊಟ್ಟರೆ ಸಾಕು. ನಮ್ಮ ಪರಿಕಲ್ಪನೆ ಸನಾತನ ಹಿಂದೂ ಧರ್ಮವನ್ನ ತಿದ್ದಬೇಕು. ಆದರೆ ಈಗಿರುವವರಿಗೆ ತಿದ್ದಲು ಆಗುತ್ತಿಲ್ಲ.  ಪ್ರಜೆಗಳ ದುಡ್ಡನ್ನು  ಪೋಲು ಮಾಡಲಾಗುತ್ತಿದೆ. ಇದನ್ನ ನೋಡಿದರೆ ನಮಗೆ ಕಣ್ಣೀರು ಬರುತ್ತದೆ. ತಪಸ್ಸು ಮಾಡಿದರೆ ಉದ್ಧಾರ ಮಾಡಲಾಗುವುದಿಲ್ಲ ಎಂದು ನಾವೆಲ್ಲ ತೀರ್ಮಾನಕ್ಕೆ ಬಂದಿದ್ದೇವೆ. ನನಗೆ ರಾಜಕೀಯದ ಆಸೆ ಇಲ್ಲ. ಆದರೆ ನಾನೇ ಮೊದಲು ಭಟ್ಕಳದಲ್ಲಿ ಈ ಪ್ರಯೋಗ ಮಾಡಿಸುತ್ತೇನೆ. ಸುನೀಲ್ ನಾಯ್ಕ, ಮಂಕಾಳ ವೈದ್ಯ, ಜೆ.ಡಿ.ನಾಯ್ಕ, ಆರ್.ಎನ್.ನಾಯ್ಕ ಯಾರೇ ಆಕಾಂಕ್ಷಿ ಇದ್ದರೂ ಈ ವೇಳೆ ಹಿಂದೆ ಸರಿಯುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ಇದನ್ನು ಓದಿ: ಬೆಂಬಲ ಬೆಲೆ ಅಡಿ ರಾಗಿ ಖರೀದಿ ಹೆಚ್ಚಳಕ್ಕೆ ನಿರ್ಧಾರ ; ಸಿಎಂ ಬಸವರಾಜ ಬೊಮ್ಮಾಯಿ

ಸ್ವಾಮಿಗಳು ಚುನಾವಣೆಗೆ ನಿಲ್ಲುತ್ತಾರೆಂದು ಯಾರೂ ಹೆದರಬೇಕಿಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಎಲ್ಲರನ್ನೂ ಸರಿಸಮಾನವಾಗಿ ಕಾಣಲು ನಾವು ರಾಜಕೀಯಕ್ಕೆ ಸ್ಪಧಿಸುತ್ತಿದ್ದೇವೆ. ಎಲ್ಲರೂ ಸಹೋದರತ್ವ ಪಾಲಿಸಬೇಕು ಎಂದರು.
Published by:Seema R
First published: