Uttara Kannada News: ಮೇ 8 ರಿಂದ ನಿಷೇಧಾಜ್ಞೆ, ಈ ತಪ್ಪು ಮಾಡಲೇಬೇಡಿ

ಚುನಾವಣೆ ಅಪ್​ಡೇಟ್​

ಚುನಾವಣೆ ಅಪ್​ಡೇಟ್​

ಈ ಅವಧಿಯಲ್ಲಿ ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ.

  • Share this:

ಕಾರವಾರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ (Karnataka Elections 2023) ನಿಮಿತ್ತ ಮೇ 10ರಂದು ಉತ್ತರ ಕನ್ನಡ ಜಿಲ್ಲೆಯ ಒಟ್ಟು 1435 ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಹಾಗೂ ಜಿಲ್ಲೆಯಾದ್ಯಂತ ಚುನಾವಣಾ ಪ್ರಕ್ರಿಯೆಗಳಿಗೆ ಅನ್ವಯಿಸುವಂತೆ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಮೇ  8ರಂದು ರಾತ್ರಿ 10 ಗಂಟೆಯಿಂದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಉತ್ತರ ಕನ್ನಡ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.


ಹೀಗೆ ಮಾಡುವುದು ಬ್ಯಾನ್
ಈ ಅವಧಿಯಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಉದ್ದೇಶದ ಹೊರತಾಗಿ ಹೆಚ್ಚು ಜನರು ಗುಂಪು ಸೇರುವುದು ನಿಷೇಧಿಸಲಾಗಿದೆ. ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ ಸಭೆ ನಡೆಸುವಂತಿಲ್ಲ. ಶಸ್ತ್ರ, ಬಡಿಗೆ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ , ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.




ಇದನ್ನೆಲ್ಲ ಮಾಡುವಂತೆಯೇ ಇಲ್ಲ
ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಅಭ್ಯರ್ಥಿಯ ಪರ ಮತಯಾಚಿಸುವುದನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆದುಕೊಳ್ಳುವಂತೆ ಸೂಚಿಸಲಾಗಿದೆ. 


karnataka vidhana sabha general election constituency profile hebbal bengaluru city
ಸಾಂದರ್ಭಿಕ ಚಿತ್ರ


ಇದನ್ನೂ ಓದಿ: Fish Hunting: ಕೆಸರು ತುಂಬಿದ ಕೆರೆಯಲ್ಲಿ ಭರ್ಜರಿ ಮೀನು ಶಿಕಾರಿ, ಇದು ಕೆರೆ ಬೇಟೆಯ ಸ್ಪೆಷಲ್!


ಕೋವಿಡ್ ಮಾರ್ಗಸೂಚಿಗಳನ್ನು/ ನಿಯಮಗಳನ್ನು ಪಾಲಿಸುವುದು, ಮತದಾನದ ದಿನದಂದು ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್, ಇನ್ನಿತರ ಎಲೆಕ್ಟ್ರಾನಿಕ್ಸ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು ಅಥವಾ ಸಿಬ್ಬಂದಿಯನ್ನು ಹೊರತುಪಡಿಸಿ ಇತರರಿಗೆ ಈ ನಿಯಮ ಅನ್ವಯವಾಗಲಿದೆ.


ಧ್ವನಿವರ್ಧಕ ಬಳಕೆ ಬ್ಯಾನ್
ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ, ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಕೂಡ ಬಳಸುವಂತಿಲ್ಲ. 


ಇದನ್ನೂ ಓದಿ: Business Idea: ಬೇಸಿಗೆ ರಜೆ ಬ್ಯುಸಿನೆಸ್! ಮಾವಿನ ಹಣ್ಣು ಮಾರಿ ದಿನಕ್ಕೆ 5 ಸಾವಿರ ದುಡಿಯುವ ಮಕ್ಕಳು


ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

top videos
    First published: