Pancha Prana Yojana: ಪಂಚಪ್ರಾಣ ಯೋಜನೆ: ಸಮುದಾಯ ಅಭಿವೃದ್ದಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉದ್ಯೋಗ (ಸಾಂದರ್ಭಿಕ ಚಿತ್ರ)

ಉದ್ಯೋಗ (ಸಾಂದರ್ಭಿಕ ಚಿತ್ರ)

ಪಂಚಪ್ರಾಣ ಯೋಜನೆಯಡಿ ನುರಿತ, ಉತ್ತಮ ಜ್ಞಾನವುಳ್ಳ ಗಣ್ಯರನ್ನು ಸೇರಿಸಿ 500ಕ್ಕೂ ಹೆಚ್ಚು ಯುವಜನರೊಡನೆ ಪ್ರಶ್ನೋತ್ತರದ ಮೂಲಕ ಸಂವಾದ ನಡೆಸಲಾಗುತ್ತದೆ.

  • News18 Kannada
  • 5-MIN READ
  • Last Updated :
  • Bijapur, India
  • Share this:

ವಿಜಯಪುರ:  ಏಪ್ರಿಲ್ 1 ರಿಂದ ಮೇ 31 ರವರೆಗೆ ಪಂಚಪ್ರಾಣ ಯೋಜನೆಯನ್ನು (Pancha Prana Yojana) ವಿಜಯಪುರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಈ ಕುರಿತು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಮತ್ತು ನೆಹರು ಯುವ ಕೇಂದ್ರ ಸಂಘಟನೆ ವತಿಯಿಂದ ಸಮುದಾಯ ಅಭಿವೃದ್ದಿ ಆಧಾರಿತ ಸಂಸ್ಥೆಗಳ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ (Vijayapura News) ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 


ಪಂಚಪ್ರಾಣ ಯೋಜನೆಯಡಿ ನುರಿತ, ಉತ್ತಮ ಜ್ಞಾನವುಳ್ಳ ಗಣ್ಯರನ್ನು ಸೇರಿಸಿ 500ಕ್ಕೂ ಹೆಚ್ಚು ಯುವಜನರೊಡನೆ ಪ್ರಶ್ನೋತ್ತರದ ಮೂಲಕ ಸಂವಾದ ನಡೆಸಲಾಗುತ್ತದೆ. ಈ ಕಾರ್ಯಕ್ರಮ ಆಯೋಜನೆಗೆ ರಾಜಕೀಯ ಪಕ್ಷವಲ್ಲದ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಕೊನೆಯ ದಿನಾಂಕ ಹೀಗಿದೆ
ಆಸಕ್ತ ಜಿಲ್ಲೆಯ ಸಮುದಾಯ ಅಭಿವೃದ್ದಿ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾ ನೆಹರು ಯುವ ಕೇಂದ್ರದಲ್ಲಿ ಅರ್ಜಿ ಪಡೆಯಬಹುದಾಗಿದೆ. ನಂತರ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆ, ಸ್ವ ವಿವರದೊಂದಿಗೆ ಮಾರ್ಚ್ 29, 2023 ರ ಒಳಗೆ ಸಲ್ಲಿಸಬೇಕಿದೆ.  


ಇದನ್ನೂ ಓದಿ: Vijayapura: ವಿಜಯಪುರದ ಯುವಕ ಯುವತಿಯರಿಗೆ ಸಂತಸದ ಸುದ್ದಿ




ಈ ವಿಳಾಸವನ್ನು ಸಂಪರ್ಕಿಸಬಹುದು
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿ, ಹಳೆ ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಡಿಸಿ ಆಫೀಸ್ ರಸ್ತೆ, ಗಗನ್ ಮಹಲ್ ಎದುರುಗಡೆ, ವಿಜಯಪುರ ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ.


ಇದನ್ನೂ ಓದಿ: Vijayapura Airport: ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ, ಇಲ್ಲಿದೆ ಮಹತ್ವದ ಅಪ್​ಡೇಟ್


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-244130  ಸಂಪರ್ಕಿಸಬಹುದಾಗಿದೆ. ಖುದ್ದಾಗಿ ಈ ಕಚೇರಿಗೆ ಭೇಟಿ ನೀಡುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ,ವಿಜಯಪುರ

First published: