• Home
  • »
  • News
  • »
  • vijayapura
  • »
  • Bank Loan: ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ; ಹೀಗೆ ಅಪ್ಲೈ ಮಾಡಿ

Bank Loan: ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ; ಹೀಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿಯನ್ನ ಸಲ್ಲಿಸುವ ಫಲಾನುಭವಿಗಳಿಗೆ ವಯಸ್ಸಿನ ಮಿತಿ ಇರುವುದಿಲ್ಲ. ಸೂಕ್ತ ದಾಖಲೆಯನ್ನ ನೀಡಿ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.

  • News18 Kannada
  • Last Updated :
  • Bijapur, India
  • Share this:

    ವಿಜಯಪುರ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ವಿಜಯಪುರ ಜಿಲ್ಲೆಯ (Vijayapura News) ಪರಿಶಿಷ್ಟ ಜಾತಿ ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಒಳಪಡುವ ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿಯನ್ನ ಸಲ್ಲಿಸುವ ಫಲಾನುಭವಿಗಳಿಗೆ ವಯಸ್ಸಿನ ಮಿತಿ ಇರುವುದಿಲ್ಲ. ಸೂಕ್ತ ದಾಖಲೆಯನ್ನ ನೀಡಿ ಸಾಲ ಸೌಲಭ್ಯವನ್ನು (Loan Facility)  ಪಡೆಯಬಹುದಾಗಿದೆ. ಅರ್ಜಿಯನ್ನ ಸಲ್ಲಿಸಿದ ಕೆಲ ದಿನಗಳ ಬಳಿಕ ಆಯ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಹೆಸರನ್ನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಮಾಹಿತಿ ನೀಡಲಾಗುತ್ತದೆ. 

    ಯೋಜನೆಯ ಹೆಸರುಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯ
    ಕೊನೆಯ ದಿನಾಂಕ20-11-2022
    ಹೇಗೆ ಅರ್ಜಿ ಸಲ್ಲಿಸಬಹುದು?ಇಲ್ಲಿ ಕ್ಲಿಕ್ ಮಾಡಿ

    ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ ದ್ವಿಚಕ್ರ, ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗಿದೆ
    ಈ ಯೋಜನೆಯಡಿ ಅರ್ಜಿ ಸಲ್ಲಿಸಲು 20-11-2022 ಕೊನೆಯ ದಿನಾಂಕವಾಗಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಇದನ್ನೂ ಓದಿ: Vijayapura: ವರ್ಷದ 6 ತಿಂಗಳು ಮಾತ್ರ ಇವರು ರೈತರು!


    ವಿಜಯಪುರ ಜಿಲ್ಲೆಯಲ್ಲಿ ಮಹಿಳಾ ಸ್ವಸಹಾಯ ಗುಂಪು ಹೊಂದಿದವರು ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ ಸೌಲಭ್ಯವನ್ನ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.


    ಇದನ್ನೂ ಓದಿ: Bagalakote Viral Video: ಕೃಷ್ಣಾ ನದಿಯಲ್ಲಿ ಟ್ರ್ಯಾಕ್ಟರ್ ತೇಲುತ್ತೆ! ಕಬ್ಬು ಅತ್ತಂದಿತ್ತ ದಾಟುತ್ತೆ!


    ಜೊತೆಗೆ ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ ದ್ವಿ ಚಕ್ರ, ತ್ರಿ ಚಕ್ರ ಸರಕು ಸಾಗಾಣಿಕೆ ವಾಹನವನ್ನ ಖರೀದಿಸಲು ಸಹ ಸಾಲ ಸೌಲಭ್ಯವನ್ನ ನೀಡಲಾಗುತ್ತದೆ. ಆಸಕ್ತರು ಇದೇ ತಿಂಗಳು ನವೆಂಬರ್ 20ರ ಒಳಗಾಗಿ ಅರ್ಹರು ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನ ಪಡೆಯಬಹುದಾಗಿದೆ.

    Published by:ಗುರುಗಣೇಶ ಡಬ್ಗುಳಿ
    First published: