ವಿಜಯಪುರ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಸೌಲಭ್ಯವೊಂದನ್ನು ವಿವಿಧ ಇಲಾಖೆಗಳಿಂದ ಒದಗಿಸಲಾಗಿದೆ. ವಸತಿ ಶಾಲೆಗಳಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಶಾಲೆಗಳು ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿವೆ.
ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA ಮಾರ್ಚ್ 12 ರ ಭಾನುವಾರ ಬೆಳಿಗ್ಗೆ 11ರಿಂದ ಮದ್ಯಾಹ್ನ 1 ಗಂಟೆವರೆಗೆ ನಡೆಯುವ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಂದಿನಿಂದಲೇ ಅರ್ಜಿ ಸಲ್ಲಿಸಬಹುದು
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಯಲ್ಲಿ ಜನವರಿ 1ರ ಒಳಗೆ ಬೆಳಗ್ಗೆ 11ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 22ರ ಮಧ್ಯರಾತ್ರಿಯವರೆಗೂ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗಿದೆ ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ ಮತ್ತು ವಸತಿ ಶಿಕ್ಷಣ ಸಂಸ್ಥೆಯ ವೆಬ್ಸೈಟ್ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆ ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಪ್ರಶಾಂತ ಹೂಗಾರ, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ