• Home
  • »
  • News
  • »
  • vijayapura
  • »
  • Award: ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ; ಹೀಗೆ ಅರ್ಜಿ ಹಾಕಿ

Award: ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ; ಹೀಗೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಒಂದು ಯುವ ಸಂಘಕ್ಕೆ 25,000 ರೂ.ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ.

  • News18 Kannada
  • Last Updated :
  • Bijapur, India
  • Share this:

    ವಿಜಯಪುರ: ಕೇಂದ್ರ ಸರ್ಕಾರದ ವಿಜಯಪುರ ನೆಹರು ಯುವ ಕೇಂದ್ರದಿಂದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಘ ಮತ್ತು ಸಂಸ್ಥೆಗಳ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯ (Vijayapura) ಅರ್ಹ ಯುವಕ, ಯುವತಿಯರ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಸಂಘವು ಕರ್ನಾಟಕ ರಾಜ್ಯ ಸಂಘ - ಸಂಸ್ಥೆ ನೋಂದಣಿ ಕಾಯ್ದೆ ಪ್ರಕಾರ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಹಾಗಾದರೆ ಈ ಪ್ರಶಸ್ತಿ (Youh Award) ಸಲ್ಲಿಸಲು ಅಗತ್ಯವಿರುವ ಎಲ್ಲ ಮಾಹಿತಿಗಳೂ ನಿಮಗೆಂದೇ ಇಲ್ಲಿವೆ ನೋಡಿ. 


    ಯುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರಬೇಕು. ಅವಶ್ಯಕ ಅಗತ್ಯ ದಾಖಲಾತಿ ಲಗತ್ತಿಸಬೇಕು. ವಾರ್ಷಿಕ ಲೆಕ್ಕ ಪರಿಶೋಧಕ ಆಡಿಟ್ ವರದಿ ಕಡ್ಡಾಯವಾಗಿ ಸಲ್ಲಿಸುವುದು. 2021-2022ರ ಅವಧಿಯ ಛಾಯಾಚಿತ್ರಗಳು, ಪ್ರಶಸ್ತಿ ಪತ್ರಗಳು, ಪತ್ರಿಕಾ ವರದಿಗಳನ್ನು ಮಾತ್ರ ಪರಿಗಣಿನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚಿಸಲಾಗಿದೆ.


    ಇದನ್ನೂ ಓದಿ: Communal Harmony: ಹನುಮ ಮಾಲಾಧಾರಿ ಸ್ವಾಮಿ ಜಾಫರ್! ಮುಸ್ಲಿಂ ವ್ಯಕ್ತಿಯ ಭಾವೈಕ್ಯತೆಯ ಮಂತ್ರ


    ಸಂಘಗಳ ಆಯ್ಕೆ ನಿರ್ಧಾರ ಹೇಗೆ?
    ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಒಂದು ಯುವ ಸಂಘಕ್ಕೆ 25,000 ರೂ.ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ. ಅರ್ಜಿ ಸಲ್ಲಿಸಲು 2022ರ ಡಿಸೆಂಬರ್ 12 ಕೊನೆಯ ದಿನವಾಗಿದ್ದು, ಈ ದಿನಾಂಕದ ಒಳಗಾಗಿ ಫಲಾನುಭವಿಗಳು ಅರ್ಜಿ ಸಲ್ಲಿಸತಕ್ಕದ್ದು.


    ಇದನ್ನೂ ಓದಿ: Positive Story: 12 ವರ್ಷಗಳಿಂದ ಸೈಕಲ್ಲೇ ಇವರ ವಾಹನ! ಪಾಕಿಸ್ತಾನಕ್ಕೂ ಭೇಟಿ ನೀಡುವ ಆಸೆ


    ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ
    ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ವಿಜಯಪುರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08352-244130 ಸಂಪರ್ಕಿಸಲು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ್ ಎಸ್ ಡೋಂಗರೆ ಅವರು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ವಿಜಯಪುರ

    Published by:ಗುರುಗಣೇಶ ಡಬ್ಗುಳಿ
    First published: