ವಿಜಯಪುರ: 2023-24ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ (DHTT) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯ (Vijayapura News) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಓದಿ, ಉತ್ತೀರ್ಣರಾಗಿರಬೇಕು.
ಪದವಿಯ ಹೆಸರು | 2ನೇ ವರ್ಷದ ಡಿಪ್ಲೋಮಾ ಕೋರ್ಸ್ |
ಅರ್ಜಿ ಸಲ್ಲಿಕೆ ಹೇಗೆ? | https://khtigadag.ac.in/AdmissionForm.pdf |
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ | ಮೇ 31 |
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ | 08372-297221, 9448644074 ಅಥವಾ 9902561441 |
ಇದನ್ನೂ ಓದಿ: Banashankari Temple History: ಬನಶಂಕರಿ ದೇವಿಯ ಹೆಸರಿನ ಹಿಂದಿದೆ ಈ ವಿಶೇಷ ಅರ್ಥ!
ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಮೇ 31 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು 2023 ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿಬೇಕು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಗಾಗಿ ಕರೆಯಲಾಗುತ್ತದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Lokayukta: ಯಾರಾದ್ರೂ ಲಂಚಕ್ಕೆ ಬೇಡಿಕೆಯಿಟ್ರೆ ಹೀಗೆ ಮಾಡಿ
ಹೆಚ್ಚಿನ ಮಾಹಿತಿಗಾಗಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08372-297221 ಹಾಗೂ ಮೊಬೈಲ್ ಸಂಖ್ಯೆ 9448644074 ಹಾಗೂ ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಮೊಬೈಲ್ ಸಂಖ್ಯೆ 9902561441 ಇವರನ್ನು ಸಂಪರ್ಕಿಸಬಹುದಾಗಿದೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ಡಿಜಿಟಲ್, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ