Health Checkup: ನರೇಗಾ ಕೂಲಿ ಕಾರ್ಮಿಕರಿಗಾಗಿ ಒಂದು ತಿಂಗಳ ಉಚಿತ ಆರೋಗ್ಯ ತಪಾಸಣೆ

ನರೇಗಾ

ನರೇಗಾ

ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನ ಆಯೋಜಿಸಲಾಗಿದೆ.

  • News18 Kannada
  • 3-MIN READ
  • Last Updated :
  • Vijayapura, India
  • Share this:

ವಿಜಯಪುರ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರಿಗೆ ಜೂನ್ 22 ವರೆಗೆ ಒಂದು ತಿಂಗಳು ಗ್ರಾಮ ಆರೋಗ್ಯ (Health) ಅಭಿಯಾನವನ್ನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ (Zilla Panchayat) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.


ಕೂಲಿ ಕಾರ್ಮಿಕರಿಗಾಗಿ ಆರೋಗ್ಯ ಶಿಬಿರ

ನರೇಗಾ ಕೂಲಿ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆದೇಶದ ಮೇರೆಗೆ ಆರೋಗ್ಯ ಸೇವೆ ಒದಗಿಸುವ ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ (ಕರ್ನಾಟಕ ಹೆಲ್ತ್ ಪ್ರಮೋಶನ್ ಟ್ಟಸ್ಟ್), ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಕೂಲಿ ಕಾರ್ಮಿಕರುಇದರಪ್ರಯೋಜನವನ್ನ ಪಡೆಯಬಹುದಾಗಿದೆ.




ಒಂದು ತಿಂಗಳ ಅಭಿಯಾನ
ಅಭಿಯಾನದಡಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಪ್ರತಿ ಕೂಲಿ ಕಾರ್ಮಿಕರು ಉಚಿತವಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈಗಾಗಲೇ ಅಭಿಯಾನದ ಮೂಲಕ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಾತ್ಮ ಗಾಂಧಿ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.


ನರೇಗಾದಡಿ ಕೆಲಸ ನಿರ್ವಹಿಸುತ್ತಿರುವ ಇನ್ನು ಹಲವು ಕೂಲಿಕಾರ್ಮಿಕರು ಇದರಿಂದ ಹೊರಗುಳಿದಿದ್ದಾರೆ. ಹೆಚ್ಚಿನ ಕೂಲಿಕಾರ್ಮಿಕರಿಗೆ ಅನುಕೂಲ ಒದಗಿಸಿಕೊಡುವ ದೃಷ್ಟಿಯಿಂದ ಆರೋಗ್ಯ ಸೇವೆಯನ್ನು ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನದಡಿ ಒದಗಿಸಲಾಗುತ್ತಿದೆ.

ಕಾರ್ಮಿಕರ ತಪಾಸಣೆಗಾಗಿಯೇ ಕಿಟ್!


ಆರೋಗ್ಯ ಕಿಟ್ ವಿತರಣೆ ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಿಗೆ ಗ್ರಾಮೀಣ ಭಾಗದ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಯ ಉದ್ಧೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹಾಗೂ ಕೆ.ಎಚ್.ಪಿ.ಟಿ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಅಮೃತ ಆರೋಗ್ಯ ಅಭಿಯಾನದಡಿ ಹೆಲ್ತ್ ಸ್ಕ್ರೀನ್ ಕಿಟ್ ವಿತರಿಸಲಾಗಿದೆ.


ಇದನ್ನೂ ಓದಿ: ನಿಮ್ಮ ಸಮಸ್ಯೆಗಳಿಗೆ ಇಲ್ಲಿ ಸಿಗುತ್ತೆ ಪರಿಹಾರ!

ಕಿಟ್ ಉಪಯೋಗಿಸಿಕೊಂಡು ಸ್ಥಳೀಯ ಆರೋಗ್ಯ ಕೇಂದ್ರದ ಅಧಿಕಾರಿ ಹಾಗೂ ಕೆ.ಎಚ್.ಪಿ.ಟಿ ಸಿಬ್ಬಂದಿಗಳ ಸಹಾಯದಿಂದ ಗ್ರಾಮೀಣ ಭಾಗದವರ ಹಾಗೂ ಕೂಲಿಕಾರ್ಮಿಕರ ಆರೋಗ್ಯ ತಪಾಸಣೆ ಕೈಗೊಳ್ಳಲಾಗುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

top videos
    First published: