ನಿಮಗೇನಾದ್ರೂ ಹಸು ಸಾಕುವ ಉತ್ಸಾಹ ಇದೆಯೇ? ಹಸು (Cow) ಎಮ್ಮೆ ಸಾಕಿ ಹಾಲು ಮಾರಾಟ ಮಾಡಿ ಹಣ ಗಳಿಸಬೇಕು ಅಂದ್ಕೊಂಡಿದ್ದೀರಾ? ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಾಲು ಉತ್ಪಾದಕರಿಗೆ (Milk Producers) ಉತ್ತೇಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಳಿಕೆ ಅನುದಾನದಲ್ಲಿ ಕುರಿ, ಮೇಕೆ, ಹಸು ಹಾಗೂ ಎಮ್ಮೆ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಹುದು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲ ವಿವರ ಇಲ್ಲಿದೆ ನೋಡಿ.
ವಿಜಯಪುರ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ತಾಲೂಕುಗಳ ನಾಗರಿಕರು ಅರ್ಜಿ ಸಲ್ಲಿಸಬಹುದು
ವಿಜಯಪುರ ಜಿಲ್ಲೆಯ ಬಬಲೇಶ್ವರ, ಸಿಂದಗಿ, ಕೊಲ್ಹಾರ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ಇಂಡಿ, ನಿಡಗುಂದಿ, ಚಡಚಣ ಹೀಗೆ ಈ ಎಲ್ಲ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿ ನಮೂನೆ ಪಡೆಯಬಹುದಾಗಿದೆ.
ಕೊನೆಯ ದಿನಾಂಕ ಹೀಗಿದೆ
ಎಲ್ಲ ಅಗತ್ಯ ದಾಖಲೆಗಳೊಂದಿಗೆ ಈ ಯೋಜನೆಯ ಲಾಭ ಪಡೆಯಲು ರೈತರು ಡಿಸೆಂಬರ್ 30 ಒಳಗೆ ಸಂಬಂಧಿಸಿದ ತಾಲೂಕಾ ಕಚೇರಿಗೆ ನೀವು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: Good News: ಬರದ ನಾಡಲ್ಲಿ ತುಂಬಿದ ಕೆರೆಗಳು; ಎಲ್ಲೆಲ್ಲೂ ಜೀವಕಳೆ
ಕುರಿ, ಮೇಕೆ, ಹಸು ಹಾಗೂ ಎಮ್ಮೆ ಘಟಕಗಳ ಸ್ಥಾಪನೆಗೆ ಸಹಾಯ
ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಕುರಿ, ಮೇಕೆ, ಹಸು ಹಾಗೂ ಎಮ್ಮೆ ಘಟಕಗಳ ಸ್ಥಾಪನೆಗೆ ಸರ್ಕಾರದ ಈ ಯೋಜನೆ ಈ ಭಾಗದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ವಿಜಯಪುರ ಜಿಲ್ಲೆಯ ಅರ್ಹ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: Communal Harmony: ಹನುಮ ಮಾಲಾಧಾರಿ ಸ್ವಾಮಿ ಜಾಫರ್! ಮುಸ್ಲಿಂ ವ್ಯಕ್ತಿಯ ಭಾವೈಕ್ಯತೆಯ ಮಂತ್ರ
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ
ಅರ್ಹತೆ, ಲಗತ್ತಿಸಬೇಕಾದ ದಾಖಲೆಗಳು ಸೇರಿದಂತೆ ಹಲವು ದಾಖಲೆಗಳನ್ನು ಸಲ್ಲಿಸಬೇಕಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಾ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ. ಎಸ್. ಘೋಣಸಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ವಿಜಯಪುರ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ