ವಿಜಯಪುರ: ನೀವು ಉದ್ಯೋಗ ಹುಡುಕುತ್ತಿದ್ದೀರಾ? ಕಾಲೇಜು ಶಿಕ್ಷಣ (Collage Education) ಮುಗಿಸಿ ಒಳ್ಳೆ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಾದ್ರೆ ನಿಮಗೆಂದೇ ಒಂದೊಳ್ಳೆ ಅವಕಾಶ (Good Opportunity) ಹುಡುಕಿ ಬಂದಿದೆ. ಡಿಸೆಂಬರ್ 16 ರಂದು ವಿಜಯಪುರ ನಗರದ (Vijayapura News) ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದರಬಾರ ಸಮೂಹ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ವಿಜಯಪುರದಲ್ಲಿ ಉದ್ಯೋಗ ಮೇಳ (Job Fair In Vijayapura) ಹಮ್ಮಿಕೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ನಿರುದ್ಯೋಗಿಗಳಿಗೆ ಅನುಕೂಲ
ಹೌದು, ವಿಜಯಪುರ ಜಿಲ್ಲೆಯ ನಾನಾ ತಾಲೂಕಿನಲ್ಲಿ ಸಾಕಷ್ಟು ಜನ ವಿದ್ಯಾವಂತ ನಿರುದ್ಯೋಗಿಗಳಿದ್ದು ಅವರು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ. ಸಾಕಷ್ಟು ಕಂಪನಿಗಳು ಯುವಕ, ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಪ್ರಯೋಜನೆಯನ್ನ ಪಡೆಯಬಹುದಾಗಿದೆ.
ಇದನ್ನೂ ಓದಿ: Mali Roti Recipe: ಬಾಯಲ್ಲಿ ನೀರೂರಿಸುತ್ತೆ ಈ ಮಲೈ ರೊಟ್ಟಿ! ಇಲ್ಲಿದೆ ನೋಡಿ ರೆಸಿಪಿ
ಈ ಅರ್ಹತೆಗಳಿದ್ದರೆ ಈಗಲೇ ಅರ್ಜಿ ಹಾಕಿ
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಹಾಗೂ ಯಾವುದೇ ಸ್ನಾತಕೋತ್ತರ ಪದವಿ ಪಡೆದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಕೆಲಸ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: Indian Railways: ಬೆಂಗಳೂರಿನಿಂದ ದೇಶದ ಪ್ರಮುಖ ನಗರಕ್ಕೆ ವಿಶೇಷ ರೈಲು ಘೋಷಣೆ
ಅಲ್ಲದೇ ವಿಶೇಷ ಚೇತನರು ಸಹ ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಿ ತಮಗಿಷ್ಟವಾದ ಕೆಲಸವನ್ನ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ - 08352-250383, ಮೊ : 9945000793, 9620095270, 9110856771, 9900607080, 9901497747 ಅಥವಾ ಖುದ್ದಾಗಿ ವಿಜಯಪುರ ನಗರದಲ್ಲಿರುವ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ
ವರದಿ: ಪ್ರಶಾಂತ ಹೂಗಾರ, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ