ನೀವೇನಾದ್ರೂ ನಿಮ್ಮೂರಿನಲ್ಲಿ ಭೃಷ್ಟಾಚಾರದಿಂದ ಬೇಸತ್ತಿದ್ದೀರಾ? ಅಧಿಕಾರಿಗಳು ಕಿರಿಕಿರಿ ನೀಡುತ್ತಿದ್ದಾರಾ? ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರಾ? ಹಾಗಿದ್ದರೆ ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಇಲ್ಲೊಂದು ಸದವಕಾಶವಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು (Police Officers) ಬಸವನಬಾಗೇವಾಡಿಯ ತಾಲೂಕು ಪಂಚಾಯತ್ ರಾಜೀವಗಾಂಧಿ ಸೇವಾ ಕೇಂದ್ರದ ಸಭಾ ಭವನದಲ್ಲಿ ನಿಮ್ಮ ಸಮಸ್ಯೆ ಆಲಿಸಲಿದ್ದಾರೆ. ಮೇ 24 ರಂದು ಸಾರ್ವಜನಿಕರಿಂದ ಅಧಿಕಾರಿಗಳು ಅಹವಾಲು (Karnataka Lokayukta Aadaalat) ಸ್ವೀಕರಿಸಲಿದ್ದಾರೆ. ಆ ದಿನ ನಿಗದಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಬಹುದಾಗಿದೆ.
ಯಾರೆಲ್ಲ ದೂರು ನೀಡಬಹುದು?
ಸಾಮಾನ್ಯವಾಗಿ ಸರಕಾರಿ ಸೇವಾ ವಿಭಾಗದಲ್ಲಿ ಯಾವುದೇ ಕೆಲಸಕ್ಕೆ ಆಮಿಷ, ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ ಅಂತಹ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಲಿಖಿತವಾಗಿ ದೂರು ನೀಡಬಹುದು.
ಸ್ಥಳದಲ್ಲೇ ಇತ್ಯರ್ಥವಾಗುವ ಸಾಧ್ಯತೆ
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ಸಿಬ್ಬಂದಿ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತದೆ.
ಅಹವಾಲು ಸ್ವೀಕಾರ ಸಮಯ
ಮೇ 24ರಂದು ನಡೆಯಲಿರುವ ಲೋಕಾಯುಕ್ತ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನದವರೆಗೆ ಅಧಿಕಾರಿಗಳು ಖುದ್ದು ಹಾಜರಿದ್ದು ಅಹವಾಲು ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ: Banashankari Temple History: ಬನಶಂಕರಿ ದೇವಿಯ ಹೆಸರಿನ ಹಿಂದಿದೆ ಈ ವಿಶೇಷ ಅರ್ಥ!
ಹೆಚ್ಚಿನ ಮಾಹಿತಿಗಾಗಿ
ಲೋಕಾಯುಕ್ತ ಪೊಲೀಸ್ ಅಧಿಕ್ಷಕರು 9364062528, ಉಪ ಅಧೀಕ್ಷಕರು 9364062557, ಪೋಲಿಸ್ ಇನ್ಸ್ಪೆಕ್ಟರ್-1 9364062640, ಇನ್ಸ್ಪೆಕ್ಟರ್-2 9364062639 ಮತ್ತು ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: Vijayapura Mangaluru Trains: ಕೆಲ ದಿನ ಪ್ರಮುಖ ರೈಲು ಭಾಗಶಃ ರದ್ದು, ಇಲ್ಲಿದೆ ವಿವರ
ಹೆಚ್ಚಿನ ಮಾಹಿತಿಗಾಗಿ ದೂ: 08352-255333, 257786, 295074 ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ಡಿಜಿಟಲ್, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ