• Home
  • »
  • News
  • »
  • vijayapura
  • »
  • Lumpy Skin Disease: ಚರ್ಮಗಂಟು ರೋಗ ಹೆಚ್ಚಳ; ಈಗಲೂ ಜಾನುವಾರು ಸಾಗಣೆ ಮಾಡಬಹುದೇ?

Lumpy Skin Disease: ಚರ್ಮಗಂಟು ರೋಗ ಹೆಚ್ಚಳ; ಈಗಲೂ ಜಾನುವಾರು ಸಾಗಣೆ ಮಾಡಬಹುದೇ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

  • News18 Kannada
  • Last Updated :
  • Bijapur, India
  • Share this:

    ವಿಜಯಪುರ : ಜಾನುವಾರುಗಳಿಗೆ ಚರ್ಮಗಂಟು (Lumpy Skin Disease) ವ್ಯಾಪಕವಾಗಿ ಹರಡುತ್ತಿರುವ ಕಾರಣ ರೋಗ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಾಗಾಣಿಕೆ ನಿಷೇಧಿಸುವ ಅವಧಿಯನ್ನು ವಿಸ್ತರಿಸಿ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


    ವಿಜಯಪುರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 16ರವರೆಗೆ ಇದ್ದ ಅವಧಿಯನ್ನು ಅಕ್ಟೋಬರ್ 30 ರವರೆಗೆ ವಿಸ್ತರಿಸಿ ಕರ್ನಾಟಕ ಅನಿಮಲ್ ಡಿಸೀಜ್ (ಕಂಟ್ರೋಲ್) ಆ್ಯಕ್ಟ್ 1961ರಡಿ ಮತ್ತು ಸಿಆರ್‌ಪಿಸಿ ಕಾಯಿದೆ 1973 ಕಲಂ 144ರ ಮೇರೆಗೆ ವಿಜಯಪುರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸುವ ಅವಧಿಯನ್ನು ಅಕ್ಟೋಬರ್ 30ರವರೆಗೆ ಮುಂದುವರೆಸಿ ಆದೇಶಿಸಲಾಗಿದೆ. ಈ ಜಾನುವಾರುಗಳ ಪೈಕಿ ಕುರಿ ಮತ್ತು ಮೇಕೆಯನ್ನು ಸೇರಿಸಲಾಗಿಲ್ಲ. ಹೀಗಾಗಿ ಕುರಿ ಮತ್ತು ಮೇಕೆಯನ್ನು ಸಾಗಣೆ ಮಾಡಬಹುದಾಗಿದೆ.


    ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಡಿವಾಣ
    ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗವು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಾಣಿಸಿಕೊಂಡಿದೆ. ಹೀಗಾಗಿ ಹೈನುಗಾರಿಕೆ ನಡೆಸುತ್ತಿರುವವರು ಆತಂಕಿತರಾಗಿದ್ದಾರೆ.‌ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಬೇಕಾಗಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಭೆ ನಡೆಸಿದೆ. ಸಭೆಯನ್ವಯ ಜಿಲ್ಲೆಯಲ್ಲಿ ಜಾನುವಾರ ಸಾಗಾಟದ ಮೇಲೆ ನಿಯಂತ್ರಣ ಹೇರಲಾಗಿದೆ. ತಾತ್ಕಾಲಿಕವಾಗಿ ಜಾನುವಾರು ಸಾಗಾಟಕ್ಕೆ ಕಡಿವಾಣವನ್ನೂ ಹಾಕಲಾಗಿದೆ.


    ಇದನ್ನೂ ಓದಿ: Ilkal Saree Special: ಇಳಕಲ್ ಸೀರೆ ಹೀಗೆ ತಯಾರಾಗುತ್ತೆ! ನೀವೂ ಮಿರಮಿರ ಮಿಂಚಿ!


    ಚರ್ಮಗಂಟು ಹೇಗೆ ಬರುತ್ತೆ?
    ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.


    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಗಾಟ ನಿಷೇಧ
    ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 20 ರಿಂದ ನವೆಂಬರ್ 30ರ ವರೆಗೆ ಅನ್ವಯಿಸುವಂತೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.


    ಇದನ್ನೂ ಓದಿ: Positive Story: ನ್ಯೂಸ್ 18 ಕನ್ನಡ ಡಿಜಿಟಲ್ ಫಲಶೃತಿ; ವಿಜಯಪುರದಲ್ಲಿ ಸೊಳ್ಳೆ ನಿರ್ಮೂಲನೆಗೆ ಪಣ


    ಫಾಗಿಂಗ್ ನಡೆಸಲು ಸೂಚನೆ
    ಚರ್ಮಗಂಟು ವ್ಯಾಪಕವಾಗಿ ಹರಡುವ ಸಾಧ್ಯತೆ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಜಿಲ್ಲಾದಿಕಾರಿಯವರು ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.


    ವರದಿ - ಪ್ರಶಾಂತ ಹೂಗಾರ ನ್ಯೂಸ್18 ಕನ್ನಡ ವಿಜಯಪುರ

    Published by:ಗುರುಗಣೇಶ ಡಬ್ಗುಳಿ
    First published: