ಉತ್ತರ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಒಳ್ಳೆ ಸುದ್ದಿಯೊಂದು ಹೊರಬಿದ್ದಿದೆ. ವಿಜಯಪುರ ಜಿಲ್ಲೆಯಲ್ಲಿ ಉದ್ಯೋಗ ಮೇಳವೊಂದು ನಡೆಯಲಿದ್ದು ಹಲವು ಕಂಪನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. (ಸಾಂದರ್ಭಿಕ ಚಿತ್ರ)
ಕೆಲಸ ಹುಡುಕುತ್ತಿರುವ ಯುವಕ, ಯುವತಿಯರು ಈ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಈ ಉದ್ಯೋಗ ಮೇಳದ ಸಂಪೂರ್ಣ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ವತಿಯಿಂದ ನಗರದ ಸ್ಟೇಶನ್ ರಸ್ತೆಯ ಗುರುದತ್ತ ಮಂಗಲ ಕಾರ್ಯಾಲಯ ಎದುರಿಗಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಫೆಬ್ರವರಿ 15ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಮಾನಿಕಬಾಗ್ ಅಟೋಮೊಬೈಲ್, ICICI ಹೋಮ್ ಲೋನ್, ಹುಂಡೈ ಮೋಟಾರ್ಸ್ ಮತ್ತು ಸ್ಮಾಲ್ ಪೈನಾನ್ಸ್ ಬ್ಯಾಂಕ್, ಮುತ್ತೂಟ್ ಪೈನಾನ್ಸ್, ಫ್ಲಿಪ್ಕಾರ್ಟ್ ಲಾಜಿಸ್ಟಿಕ್ ಮುಂತಾದ ಕಂಪನಿಗಳು ಭಾಗವಹಿಸಲಿವೆ. (ಸಾಂದರ್ಭಿಕ ಚಿತ್ರ)
ಈ ಮೇಳದಲ್ಲಿ SSLC, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
ಆಸಕ್ತರು ಉದ್ಯೋಗ ಮೇಳದಲ್ಲಿ ಉಚಿತವಾಗಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಈ ಕಛೇರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಅಥವಾ ಸ್ಟೇಶನ್ ರಸ್ತೆಯ ಗುರುದತ್ತ ಮಂಗಲ ಕಾರ್ಯಾಲಯ ಎದುರಿಗಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಖುದ್ದಾಗಿ ಭೇಟಿ ನೀಡಬಹುದಾಗಿದೆ. (ಸಾಂದರ್ಭಿಕ ಚಿತ್ರ)
ಹೆಚ್ಚಿನ ಮಾಹಿತಿಗಾಗಿ ಫೋನ್ ಮುಖಾಂತರ 9945000793 / 9071055557 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
Published by:ಗುರುಗಣೇಶ ಡಬ್ಗುಳಿ
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ