ವಿಜಯಪುರ ಜಿಲ್ಲೆಯಾದ್ಯಂತ (Vijayapura News) ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ (Lok Adalat) ಆಯೋಜಿಸಲಾಗಿದೆ. ಈ ಅದಾಲತ್ನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿದ್ದಾರೆ
ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗಲೆಂದು ಈ ಕಾರ್ಯಾಗಾರ ಏರ್ಪಡಿಸಲಾಗಿದೆ. ಈ ದೃಷ್ಟಿಯಿಂದ ವಿಜಯಪುರ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯಾವ ಪ್ರಕರಣಗಳ ವಿಚಾರಣೆ, ಪರಿಹಾರ?
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಈ ಎಲ್ಲ ಪ್ರಕರಣಗಳಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: Vijayapura Students News: ವಿದ್ಯಾರ್ಥಿಗಳೇ ಗಮನಿಸಿ, ಇಲ್ಲಿದೆ ನೋಡಿ ಒಂದೊಳ್ಳೆ ಅವಕಾಶ
ಎಲ್ಲ ಪ್ರಕರಣಗಳ ವಿವರ ಹೀಗಿದೆ
ರಾಜಿಗೆ ಒಳಪಡಬಹುದಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು, ವರ್ಗಾವಣೆಗಳ ಲಿಖಿತ ಕಾಯ್ದೆಯ ಪ್ರಕರಣಗಳು, ಚೆಕ್ ಬೌನ್ಸ್ ಕೇಸ್ಗಳು, ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇತರ ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳುನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಜೊತೆಗೆ ದೂರವಾಣಿ ಬಾಕಿ ಬಿಲ್ಲುಗಳ ಪಾವತಿ ಪ್ರಕರಣಗಳು, ನೀರಿನ ಬಿಲ್ ಪಾವತಿ ಪ್ರಕರಣಗಳು, ಜೀವನಾಂಶ ಭತ್ಯೆ ಕೋರಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: Vijayapura Festival: ಪುರವಂತಿಕೆ ಮೇಳದಲ್ಲಿ ಶಸ್ತ್ರಗಳ ಕಸರತ್ತು, ಎಂಟೆದೆ ಭಂಟರಿಗೂ ಭಯ!
ವಿಜಯಪುರ ಜಿಲ್ಲೆಯಲ್ಲಿ ಜುಲೈ 8 ರಂದು ಜರುಗುವ ರಾಷ್ಟ್ರೀಯ ಲೋಕ್ ಅದಾತ್‍ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಈ ಮೂಲಕ ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಲಾಗಿದೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ಡಿಜಿಟಲ್, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ