2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕಗಳನ್ನು ನಿರ್ಮಿಸಲು ಒಂದೊಳ್ಳೆ ಅವಕಾಶವೊಂದು ಇಲ್ಲಿದೆ. ಫ್ರುಟ್ಸ್ ಗುರುತಿನ ಸಂಖ್ಯೆ ಹೊಂದಿರುವ ವಿಜಯಪುರ ಜಿಲ್ಲೆಯ (Vijayapura News) ಬಡ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ ಅರ್ಹ ಫಲಾನುಭವಿ ಆಸಕ್ತರಿಂದ ಅವಕಾಶ ಒದಗಿಸಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ (Rashtriya Krishi Vikasa) ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ (Amrith Jeevan Yojna) ಅರ್ಜಿ ಆಹ್ವಾನಿಸಲಾಗಿದೆ.
ಸ್ವೀಕೃತವಾದ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯನ್ನ ಆಯ್ಕೆ ಸಮಿತಿಯ ನಿಯಮಾನುಸಾರ ಮತ್ತು ಮೀಸಲಾತಿಯ ಅನ್ವಯ ಮಹಿಳೆಯರಿಗೆ ಹಾಗೂ ವಿಶೇಷ ಚೇತನರಿಗೆ ಆದ್ಯತೆ ನೀಡಲಾಗುತ್ತದೆ.
ವಿಜಯಪುರ ಜಿಲ್ಲೆಯ ಅರ್ಜಿದಾರರು ಆಯಾ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ಅರ್ಜಿ ನಮೂನೆ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ತಾಲೂಕು ಕಚೇರಿಗೆ ಸಲ್ಲಿಸಬೇಕಿದೆ.
ಇದನ್ನೂ ಓದಿ: Jodukare Kambala: ರಣ ರೋಚಕ ಜೋಡುಕರೆ ಕಂಬಳ, ಕುದುರೆಗಳೂ ನಾಚುವಂತೆ ಓಡಿದ ಕೋಣಗಳು!
ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ತಿಕೋಟಾ, ಬಬಲೇಶ್ವರ, ಇಂಡಿ, ಸಿಂದಗಿ, ಚಡಚಣ ತಾಲೂಕಿನಲ್ಲಿ ಎಲ್ಲ ಗ್ರಾಮಗಳ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: Vijayapura: ಮನೆಯ ಹಿರಿಯರಿಗೆ ಜೀವ ತರಿಸುವ ಬೆಚ್ಚಗಿನ ಕೌದಿ! ಚಳಿಗಾಲದಲ್ಲಿ ಇದು ಬಾರೀ ಬೆಸ್ಟ್
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಈ ಮಾಹಿತಿ ನೀಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ