Vijayapura: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಸ್ಕಾಲರ್​ಶಿಪ್; ಹೀಗೆ ಅರ್ಜಿ ಸಲ್ಲಿಸಿ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೊಡಲ್ಪಡುವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು 2022-23 ಸಾಲಿಗೆ ಈ ರೀತಿಯಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:

  ವಿಜಯಪುರ : 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕಾಗಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೂಡಲೇ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಲ್ಪಸಂಖ್ಯಾತ ಸಮುದಾಯವನ್ನು (Minority Community Students)  ಪ್ರತಿನಿಧಿಸುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಅಥವಾ ಪಾರ್ಸಿ ಹೀಗೆ ಯಾವುದಾದರೂ ಒಂದು ಸಮುದಾಯವನ್ನು ಪ್ರತಿನಿಧಿಸಿರಬೇಕು. ಹಾಗಾದರೆ ಹೇಗೆ ಅರ್ಜಿ ಸಲ್ಲಿಸುವುದು? ಎಲ್ಲಿ ಅರ್ಜಿ ಸಲ್ಲಿಸುವುದು? ಎಲ್ಲ ವಿವರ ಇಲ್ಲಿದೆ ನೋಡಿ.


  ಯಾರಿಗೆ ವಿದ್ಯಾರ್ಥಿ ವೇತನ?ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ
  ಅರ್ಹತೆ ಏನು?ಶೇ.50ರಷ್ಟು ಅಂಕ ಗಳಿಸಿರಬೇಕು
  ಯಾರೆಲ್ಲ ಅರ್ಜಿ ಸಲ್ಲಿಸಬಹುದು?ಎಲ್ಲ ತರಗತಿಗಳ ವಿದ್ಯಾರ್ಥಿಗಳು
  ಅರ್ಜಿ ಸಲ್ಲಿಕೆ ಕೊನೆ ದಿನಾಂಕ30-09-2022
  ಹೇಗೆ ಅರ್ಜಿ ಸಲ್ಲಿಸಬಹುದು?ಇಲ್ಲಿ ಕ್ಲಿಕ್ ಮಾಡಿ

  ಅರ್ಹತೆ ಏನು?
  ಅಭ್ಯರ್ಥಿಗಳು ಕಡ್ಡಾಯವಾಗಿ ಶೇ.50ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.


  ಯಾವೆಲ್ಲ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ?
  ಅದರಂತೆ 2022-23ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು 1ನೇ ತರಗತಿಯಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪಿಯುಸಿ, .ಟಿ., ಡಿಪ್ಲೋಮಾ, ಡಿಗ್ರಿ, ನರ್ಸಿಂಗ್ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳು, ಪದವಿ, ಸಾತಕೋತ್ತರ ಹಾಗೂ ಪಿಹೆಚ್ಡಿ ಹಾಗೂ ಮೆರಿಟ್ ಕಮ್ ಮೀನ್ಸ್​ನಲ್ಲಿ ತಾಂತ್ರಿಕ ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ವಿಜಯಪುರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.


  ಅರ್ಜಿ ಸಲ್ಲಿಕೆ ಕೊನೆ ದಿನಾಂಕ
  ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವವರು ದಿನಾಂಕ 30-09-2022 ಹಾಗೂ ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ದಿನಾಂಕ 31-10-2022 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


  ಇದನ್ನೂ ಓದಿ: Vijayapura: 75 ಕಿಲೋಮೀಟರ್, 8 ದಿನ, 10 ಸಾವಿರಕ್ಕೂ ಹೆಚ್ಚು ಜನ! ವಿಜಯಪುರದಲ್ಲಿ ವಿಶೇಷ ಪಾದಯಾತ್ರೆ!

  ಅರ್ಜಿ ಸಲ್ಲಿಸುವ ವೆಬ್ಸೈಟ್
  ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ನಲ್ಲಿ ಅರ್ಜಿಗಳು ಸಲ್ಲಿಸಬೇಕಾಗುತ್ತದೆ. ನಂತರ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುಗಳಲ್ಲಿ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು. ವೆಬ್​ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


  ಇದನ್ನೂ ಓದಿ: Vijayapura Muharram: ಮುಸ್ಲಿಮರೇ ಇಲ್ಲದ ಊರಲ್ಲಿ ಹಿಂದೂಗಳಿಂದ ಮೊಹರಂ! ವೀಡಿಯೋ ನೋಡಿ

  ಹೆಚ್ಚಿನ ಮಾಹಿತಿಗಾಗಿ
  ಯಾವುದೇ ಹೆಚ್ಚಿನ ಮಾಹಿತಿಗಾಗಿ ಅರ್ಹ ವಿದ್ಯಾರ್ಥಿಗಳಿಗಾಗಿ ಇಲಾಖೆಯ ವೆಬ್‌ಸೈಟ್  ಹಾಗೂ ಇಲ್ಲಿ ಕ್ಲಿಕ್ ಮಾಡುವ ಮೂಲಕ ಮತ್ತು ಜಿಲ್ಲಾ ಕಚೇರಿ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.


  ವರದಿ ಪ್ರಶಾಂತ ಹೂಗಾರ ನ್ಯೂಸ್18 ಕನ್ನಡ ವಿಜಯಪುರ

  Published by:guruganesh bhat
  First published: