• Home
  • »
  • News
  • »
  • vijayapura
  • »
  • Vijayapura: ಕಲಾವಿದರೇ, ಇಲ್ಲಿದೆ ಒಂದೊಳ್ಳೆ ಅವಕಾಶ, ಈಗಲೇ ಅರ್ಜಿ ಹಾಕಿ

Vijayapura: ಕಲಾವಿದರೇ, ಇಲ್ಲಿದೆ ಒಂದೊಳ್ಳೆ ಅವಕಾಶ, ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.

  • News18 Kannada
  • Last Updated :
  • Bijapur, India
  • Share this:

    ವಿಜಯಪುರ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2022-23ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ (Vijayapura News) ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು (Art Teams) ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಹಾಗಾದರೆ  ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಲು ಏನೆಲ್ಲ ನಿಯಮಗಳಿವೆ ಎಲ್ಲ ವಿವರ ಇಲ್ಲಿದೆ ನೋಡಿ.

    ಕಲಾವಿದರುಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳು
    ಅಗತ್ಯವಿರುವ ಕಲಾವಿದರು3 ಬೀದಿ ನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳು
    ಕೊನೆಯ ದಿನಾಂಕ14-11-2022 ರ ಒಳಗೆ
    ಸಂಪರ್ಕ ಸಂಖ್ಯೆ8660068406

    ಈ ನಿಯಮಗಳನ್ನೂ ಗಮನಿಸಿ
    ವಿಜಯಪುರ ಜಿಲ್ಲೆಯಿಂದ 3 ಬೀದಿ ನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ ಮೂವರು ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು ಎಂಬ ನಿಯಮವನ್ನು ರೂಪಿಸಲಾಗಿದೆ.


    ಇದನ್ನೂ ಓದಿ: Positive Story: ಲಕ್ಷ ಲಕ್ಷ ಸ್ವಂತ ಹಣದಲ್ಲಿ ಊರು ಕ್ಲೀನ್ ಮಾಡೋ ವಿಜಯಪುರದ ಯುವಕರು!


    ಆಯ್ಕೆಯಾದ ಕಲಾವಿದರಿಗೆ ಸರ್ಕಾರದಿಂದ ಸಂಭಾವನೆ
    ಪ್ರತಿ ವರ್ಷದಂತೆ ಈ ವರ್ಷವು ಸಹ ವಿಜಯಪುರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳ ಭಾಗವಾಗಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಜಿಲ್ಲೆಯ ತಾಲೂಕು ಮತ್ತು ಆಯ್ದ ಹಳ್ಳಿಗಳಲ್ಲಿ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿ. ಆಯ್ಕೆಯಾದ ಕಲಾವಿದರಿಗೆ ಸರ್ಕಾರದಿಂದ ಸಂಭಾವನೆ ನೀಡಲಾಗುತ್ತದೆ.


    ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ
    ಆಸಕ್ತ ಅರ್ಹ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 14-11-2022ರೊಳಗೆ ಸಲ್ಲಿಸಬೇಕು.


    ಇದನ್ನೂ ಓದಿ: Vijayapura: ಸಹಜ ಹೆರಿಗೆಗೆ ಫೇಮಸ್ ಈ ಸರ್ಕಾರಿ ಆಸ್ಪತ್ರೆ! ಗರ್ಭಿಣಿಯರು ಎಲ್ಲೆಲ್ಲಿಂದ್ಲೋ ಹುಡುಕಿ ಬರ್ತಾರೆ


    ಸಲ್ಲಿಸಬೇಕಾದ ದಾಖಲೆಗಳು ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8660068406 ಸಂಖ್ಯೆಗೆ ಸಂಪರ್ಕಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ ಡಿಜಿಟಲ್ ವಿಜಯಪುರ

    Published by:ಗುರುಗಣೇಶ ಡಬ್ಗುಳಿ
    First published: