ವಿಜಯಪುರ: ಬೆಂಗಳೂರಿನ ನಿಮ್ಹಾನ್ಸ್ ಎಪಿಡೆಮಿಯಾಲಜಿ ವಿಭಾಗದ (NIMHANS Epidemiology) ಜನ ಆರೋಗ್ಯ ಸಂಸ್ಥೆಯಿಂದ ಅನುಷ್ಠಾನಗೊಂಡಿರುವ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವ ಪರಿವರ್ತಕರ ತರಬೇತಿಗಾಗಿ ವಿಜಯಪುರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯ (Vijayapura District) ವಿವಿಧ ತಾಲೂಕುಗಳಲ್ಲೇ ಕೆಲಸ ನಿರ್ವಹಿಸುವ ಅವಕಾಶ ಹೊಂದಿರುತ್ತಾರೆ. ಹೀಗಾಗಿ ಸ್ಥಳೀಯವಾಗಿಯೇ ಉದ್ಯೋಗ ಬಯಸುವ ಯುವ ಅಭ್ಯರ್ಥಿಗಳು ಈ ಕೂಡಲೇ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಕರ್ನಾಟಕ ರಾಜ್ಯ ಯುವ ನೀತಿ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಸಹ ಯುವ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯ ಅಡಿ ವಿಜಯಪುರ ಜಿಲ್ಲೆಯಲ್ಲಿಯೂ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಯುವ ಪರಿವರ್ತಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಯಾವುದೇ ಪದವಿ ಹೊಂದಿದ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಯುವಕರು ಕಡ್ಡಾಯವಾಗಿ ಸ್ಥಳೀಯ ಭಾಷೆಯಾದ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸನ್ನು ಹಾಗೂ ಉತ್ತಮ ಅಂತರ್ ವ್ಯಕ್ತಿಯ ಸಂವಹನ ಕೌಶಲ್ಯ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು.
ಯುವ ಪರಿವರ್ತಕರ ತರಬೇತಿ | ನಿಮ್ಹಾನ್ಸ್ ವತಿಯಿಂದ |
ಯಾವ ಜಿಲ್ಲೆಯವರು ಅರ್ಜಿ ಸಲ್ಲಿಸಬಹುದು? | ವಿಜಯಪುರ |
ವಯೋಮಿತಿ | 21 ರಿಂದ 35 ವರ್ಷ |
ಶೈಕ್ಷಣಿಕ ಅರ್ಹತೆ | ಯಾವುದೇ ಪದವಿ |
ಸ್ಥಳ | ವಿಜಯಪುರ ಜಿಲ್ಲೆಯ ವಿವಿಧ ತಾಲೂಕುಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 10 |
ಸಂಪರ್ಕ ಸಂಖ್ಯೆ | ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು: ದೂರವಾಣಿ ಸಂಖ್ಯೆ: 08352-223554/200101 |
ಯಾರು ಅರ್ಜಿ ಸಲ್ಲಿಸಬಹುದು?
21 ರಿಂದ 35 ವರ್ಷ ವಯೋಮಿತಿ ಒಳಗಿನ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸುವುದು ಹಾಗೂ ಗೌರವಧನವದ ಆಧಾರದ ಮೇರೆಗೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನ ಎಂದು?
ಜೂನ್ 10ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08352-223554/200101 ಹಾಗೂ ಚೇತನ ಎಂ. ಕ್ಷೇತ್ರ ಸಂಪರ್ಕ ಅಧಿಕಾರಿ 9731947828, ರೇಣುಕಾ ಬೀಳಗಿ-ಯುವ ಸಮಾಲೋಚಕರು 7349131488 ಇವರನ್ನು ಸಂಪರ್ಕಿಸಬಹುದು ಎಂದು ವಿಜಯಪುರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವರದಿ: ಪ್ರಶಾಂತ ಹೂಗಾರ, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ