Vijayapura News: ವಿಜಯಪುರದ ವಿದ್ಯಾರ್ಥಿಗಳಿಗೆ ವಸತಿ ಆಫರ್; ಕೂಡಲೇ ಅರ್ಜಿ ಸಲ್ಲಿಸಿ

ವಿಜಯಪುರ ಜಿಲ್ಲೆಯಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಸರಕಾರಿ ವಸತಿ ನಿಲಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ತಮ್ಮ ಶಿಕ್ಷಣವನ್ನು ಮುಂದುವರೆಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:

    ವಿಜಯಪುರ: ರಾಜ್ಯ ಸರಕಾರವು (Karnataka Government) ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಂಡಿವೆ. ಇದೀಗ 2022-23ನೇ ಸಾಲಿಗೆ ವಿಜಯಪುರ ಜಿಲ್ಲೆಯಲ್ಲಿ (Vijayapura News) ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರಿಂದ ಸರಕಾರಿ ವಸತಿ ನಿಲಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹತ್ತಿರದ ವಸತಿ ನಿಲಯಕ್ಕೆ ಸೇರಿ ಶಿಕ್ಷಣ ಮುಂದುವರೆಸಬಹುದಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಲಿ (Government Hostel) ಅರ್ಜಿ ಆಹ್ವಾನಿಸಲಾಗಿದೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಯಾರಿಗೆ ಈ ಯೋಜನೆ ಅನ್ವಯವಾಗುತ್ತದೆ? ಹೇಗೆ ಅರ್ಜಿ ಹಾಕುವುದು? ಇಲ್ಲಿದೆ ವಿವರ


    ಯಾವೆಲ್ಲ ಸಮುದಾಯ?
    ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


    ಎಲ್ಲೆಲ್ಲ ಪ್ರವೇಶಾವಕಾಶ?
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ನಿಡಗುಂದಿ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮುದ್ದೇಬಿಹಾಳ ಇಲ್ಲಿ ಬಾಲಕರು ಪ್ರವೇಶ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.


    ಇನ್ನು ಬಾಲಕಿಯರು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಟೇಕಡೆಗಲ್ಲಿ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ.


    ಎಷ್ಟು ಶೇಕಡಾ ಭರ್ತಿ?
    ಬಾಲಕ ಹಾಗೂ ಬಾಲಕಿಯರ ವಸತಿ ನಿಲಯುದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಜೈನ್, ಕ್ರೈಸ್ತ್ , ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯಕ್ಕೆ ಶೇ.75ರಷ್ಟು ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಭರ್ತಿ ಮಾಡಲಾಗುತ್ತದೆ.


    ಯಾವ ತರಗತಿ ವಿದ್ಯಾರ್ಥಿಗಳು ಅರ್ಹರು
    6 ನೇ ತರಗತಿಯಿಂದ 10ನೇ ತರಗತಿ ವರೆಗಿನ ಬಾಲಕ ಹಾಗೂ ಬಾಲಕಿಯರು ಸಂಬಂಧಪಟ್ಟ ವಸತಿ ನಿಲಯದಲ್ಲಿ ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.


    ಅರ್ಜಿ ಸಲ್ಲಿಸುವುದು ಹೇಗೆ?
    ‘ಸೇವಾ ಸಿಂಧು‘ ವೆಬ್ ಸೈಟ್ ಮೂಲಕ ಪ್ರವೇಶಾತಿಯನ್ನು ಕೋರಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಇದನ್ನೂ ಓದಿ: Madhavananda Prabhu: ಬ್ರಿಟೀಷರ ಎದೆ ನಡುಗಿಸಿದ್ದ ವಿಜಯಪುರದ ಸಂತ! 27 ಬಾರಿ ಜೈಲುವಾಸ ಅನುಭವಿದ್ದ ಮಾಧವಾನಂದ ಪ್ರಭು

    ಅರ್ಜಿ ಸಲ್ಲಿಕೆಗೆ ಕೊನೆ ದಿನ
    ಆಸಕ್ತ ವಿದ್ಯಾರ್ಥಿಗಳು ಜೂನ್ 30 ಒಳಗಾಗಿ ಅರ್ಜಿ ಸಲ್ಲಿಸಬೇಕು.


    ಆಫ್ ಲೈನ್ ಮೂಲಕ ಕಚೇರಿಗೆ ತಲುಪಿಸಿ
    ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅದರ ಮೂಲ ಪ್ರತಿಯನ್ನು (ಹಾರ್ಡ್ ಕಾಪಿ) ವಸತಿ ನಿಲಯಗಳ ಮೇಲ್ವಿಚಾರಕರಿಗೆ ಅಥವಾ ತಾಲೂಕು ವಿಸ್ತರಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪ ವಿಭಾಗ, ವಿಜಯಪುರ ಇಲ್ಲಿಗೆ ತಲುಪಿಸುವಂತೆ ತಿಳಿಸಲಾಗಿದೆ.


    ಇದನ್ನೂ ಓದಿ: Almatti: ಆಲಮಟ್ಟಿಯಲ್ಲಿ ಮಾಯಾಲೋಕ! ಇಲ್ಲಿದೆ ನೋಡಿ ವಿಡಿಯೋ

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪ ವಿಭಾಗ, ವಿಜಯಪುರ ಪೋನ್ ಸಂಖ್ಯೆ 94489 86236 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.


    ವರದಿ: ಪ್ರಶಾಂತ ಹೂಗಾರ ನ್ಯೂಸ್ 18 ಕನ್ನಡ ವಿಜಯಪುರ
    Published by:guruganesh bhat
    First published: