Vijayapura News: ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ; ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಉಪ್ಪಾದ ಸಮುದಾಯದ ಜನರಿಗೆ ಆರ್ಥಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ಸಾಲ ಸೌಲಭ್ಯ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಸವಿವರಗಳೊಂದಿಗೆ ಆಸಕ್ತರು ಈ ಕೆಳಗಿನಂತೆ ಅರ್ಜಿ ಸಲ್ಲಿಸಬಹುದಾಗಿದೆ.

ಈಗಲೇ ಅರ್ಜಿ ಸಲ್ಲಿಸಿ

ಈಗಲೇ ಅರ್ಜಿ ಸಲ್ಲಿಸಿ

  • Share this:

    ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪ್ಪಾರ ಸಮಾಜದ ಮಂದಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.  ಸ್ವ ಉದ್ಯೋಗದ ಕನಸು ಕಾಣುತ್ತಿರುವ ವಿಜಯಪುರ ಜಿಲ್ಲೆಯ (Vijayapura News) ಉಪ್ಪಾರ ಮತ್ತು ಅದರ ಉಪಜಾತಿಗೆ ಸೇರಿದ ಜನರಿಗೆ ಆರ್ಥಿಕವಾಗಿ ಸಹಾಯಧನ ಹಾಗೂ ಸಾಲ ಸೌಲಭ್ಯ ಕಲ್ಪಿಸಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಅರ್ಜಿ ಆಹ್ವಾನಿಸಿದೆ. 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ (Subsidy Scheme) ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಈ ಕೆಳಗಿನ ವಿವರಗಳಂತೆ ಅರ್ಜಿ ಸಲ್ಲಿಸುವ ಮೂಲಕ ಸಾಲ ಹಾಗೂ ಸಹಾಯಧನವನ್ನು ಪಡೆಯಬಹುದಾಗಿದೆ.


    ಅರ್ಜಿ ಸಲ್ಲಿಸುವುದು ಹೇಗೆ?
    ಸುವಿಧ ತಂತ್ರಾಂಶದ ಮೂಲಕ ಸಂಪೂರ್ಣ ವಿವರಗಳನ್ನು ದಾಖಲಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಹೀಗಿದೆ
    ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನವಾಗಿರುತ್ತದೆ.


    ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು?
    ಅರ್ಜಿದಾರರು ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲೆಯ ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. 


    ವಿಳಾಸ ಹೀಗಿದೆ
    ಕರ್ನಾಟಕ
    ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಎಸ್..ಜಾಗೀರದಾರ ಅವರ ಮನೆ ತಾಜ್ ಮಂಜಿಲ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಎದುರಿಗಿರುವ ಬಾಗಲಕೋಟ ರೋಡ್, ವಿಜಯಪುರ-586101


    ನಿಗಮದ ಜಿಲ್ಲಾ ಕಚೇರಿ ಸಹಾಯವಾಣಿ ದೂರವಾಣಿ ಸಂಖ್ಯೆ : 08354-236216 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ವ್ಯವಸ್ಥಾಪಕರಾದ ಕೆ..ಕಾಂಬಳೆ ಅವರು ತಿಳಿಸಿದ್ದಾರೆ.


    ವರದಿ: ಪ್ರಶಾಂತ ಹೂಗಾರ, ವಿಜಯಪುರ
    Published by:guruganesh bhat
    First published: